ADVERTISEMENT

ಅಫ್ಗಾನಿಸ್ತಾನದಲ್ಲಿ ‍ಪ್ರವಾಹ: 70 ಮಂದಿ ಸಾವು

ಏಜೆನ್ಸೀಸ್
Published 26 ಆಗಸ್ಟ್ 2020, 11:22 IST
Last Updated 26 ಆಗಸ್ಟ್ 2020, 11:22 IST
ಅಫ್ಗಾನಿಸ್ತಾನದಲ್ಲಿ ‍ಪ್ರವಾಹ
ಅಫ್ಗಾನಿಸ್ತಾನದಲ್ಲಿ ‍ಪ್ರವಾಹ   

ಕಾಬೂಲ್‌: ಉತ್ತರ ಮತ್ತು ಪೂರ್ವ ಅಫ್ಗಾನಿಸ್ತಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಪ್ರವಾಹದಲ್ಲಿ ಸಿಲುಕಿ 70 ಮಂದಿ ಮೃತಪಟ್ಟಿದ್ದಾರೆ.

ಪರ್ವಾನ್ ಪ್ರಾಂತ್ಯದಲ್ಲಿ ಇಡೀ ರಾತ್ರಿ ಭಾರಿ ಮಳೆ ಸುರಿದಿದೆ. ಈವರೆಗೆ ಇಲ್ಲಿ ಪ್ರವಾಹದಿಂದಾಗಿ 66 ಮಂದಿ ಮೃತಪಟ್ಟಿದ್ದಾರೆ. ಇನ್ನು ಹಲವು ಮಂದಿ ಮನೆಗಳ ಅವಶೇಷಗಳಡಿ ಸಿಲುಕಿದ್ದಾರೆ.

ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದಾರೆ. ಕೆಲ ಗಾಯಾಳುಗಳ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ಸ್ಥಳೀಯಆಸ್ಪತ್ರೆಯ ಮುಖ್ಯಸ್ಥ ಅಬ್ದುಲ್‌ಖಾಸಿಂ ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.