ಖಾರ್‌ತೋಮ್: ಸುಡಾನ್ ದೇಶದಲ್ಲಿ ಭಾರೀ ಮಳೆಯಿಂದ ಸಾವಿರಾರು ಮನೆಗಳು ನೆಲಸಮವಾಗಿದ್ದು, ರಾಜಧಾನಿ ಖಾರ್‌ತೋಮ್‌ನಲ್ಲಿ ವ್ಯಾಪಕ ನೀರು ತುಂಬಿಕೊಂಡಿದೆ.
ಕಳೆದ ನಾಲ್ಕು ದಿನಗಳಲ್ಲಿ ಸುರಿದ ಮಳೆಯಿಂದ ಸುಡಾನ್‌ನ 8 ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, 12 ಸಾವಿರ ಜನರು ನಿರಾಶ್ರಿತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಈ ಪ್ರದೇಶಗಳಲ್ಲಿ 800 ಮನೆಗಳು ಸಂಪೂರ್ಣ ನೆಲಸಮವಾಗಿದ್ದು ಸುಮಾರು 4400 ಮನೆಗಳಿಗೆ ಹಾನಿಯಾಗಿದೆ. ಆದರೆ, ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ.
ಕಳೆದ ವರ್ಷ ಸಂಭವಿಸಿದ ಪ್ರವಾಹದಲ್ಲಿ ಸುಮಾರು 6.50 ಲಕ್ಷ ಜನ ನಿರಾಶ್ರಿತರಾಗಿದ್ದು, 1.10 ಲಕ್ಷ ಮನೆಗಳು ನಾಶವಾಗಿದ್ದವು.
ಜೂನ್‌ನಿಂದ ಅಕ್ಟೋಬರ್‌ನಲ್ಲಿ ಸುಡಾನ್‌ನಲ್ಲಿ ಮಳೆಯಾಗುವ ಅವಧಿಯಾಗಿದ್ದು, ಈ ಸಂದರ್ಭದಲ್ಲಿ ಉಂಟಾಗುವ ಪ್ರವಾಹಕ್ಕೆ ಪ್ರಾಣಹಾನಿ, ಆಸ್ತಿಪಾಸ್ತಿ ಹಾಗೂ ಅಪಾರ ಬೆಳೆನಾಶ ಪ್ರತಿ ವರ್ಷ ಆಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.