ADVERTISEMENT

ಫೋರ್ಬ್ಸ್: ವಿಶ್ವದ 100 ಪ್ರಭಾವಿ ಮಹಿಳೆಯರಲ್ಲಿ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 10:31 IST
Last Updated 13 ಡಿಸೆಂಬರ್ 2019, 10:31 IST
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್   

ನ್ಯೂಯಾರ್ಕ್‌: ಫೋರ್ಬ್ಸ್ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಭಾರತದಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಎಚ್‌ಸಿಎಲ್‌ ಕಾರ್ಪೊರೇಷನ್ ಸಿಇಒ ರೋಶನಿ ನಡಾರ್‌ ಮಲ್ಹೋತ್ರಾ ಮತ್ತು ಬಯೋಕಾನ್‌ ಸಂಸ್ಥಾಪಕಿ ಕಿರಣ್‌ ಮಜುಂದಾರ್ ಶಾ ಸ್ಥಾನಪಡೆದಿದ್ದಾರೆ.

ಮೊದಲ ಬಾರಿಗೆ ಫೋರ್ಬ್ಸ್‌ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ನಿರ್ಮಲಾ ಸೀತಾರಾಮನ್‌ ಅವರು 34ನೇ ಸ್ಥಾನ ಪಡೆದಿದ್ದಾರೆ. ಇನ್ನು ರೋಶನಿ54ನೇ ಹಾಗೂ ಕಿರಣ್‌ ಮಜುಂದಾರ್‌ ಶಾ ಅವರು 65ನೇ ಸ್ಥಾನದಲ್ಲಿದ್ದಾರೆ.

ದೇಶದ ಮೊದಲ ಪೂರ್ಣ ಪ್ರಮಾಣದ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಸೀತಾರಾಮನ್‌ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಣಕಾಸು ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು.

ADVERTISEMENT

ಜರ್ಮನಿಯ ಚಾನ್ಸಲರ್ ಏಂಜೆಲಾ ಮರ್ಕೆಲ್ ಅವರು ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ. ಯರೋಪಿಯನ್‌ ಸೆಂಟ್ರಲ್‌ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನೆ ಲಗಾರ್ಡ್ ಎರಡನೇ ಅಮೆರಿಕ ಸಂಸತ್ತಿನ ಸ್ಪೀಕರ್‌ ನ್ಯಾನ್ಸಿ ಪೆಲೊಸಿ ಮೂರನೇ ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.