ಬೀಜಿಂಗ್: ಚೀನಾದ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ಬುಧವಾರ ಮೃತಪಟ್ಟಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.
ಈ ಕುರಿತು ಚೈನೀಸ್ ಸ್ಟೇಟ್ ಮೀಡಿಯಾ ವರದಿ ಮಾಡಿದೆ.
ಜಿಯಾಂಗ್ ಅವರು ಬಹುಅಂಗಾಂಗ ವೈಪಲ್ಯದಿಂದ ಶಾಂಘೈನಲ್ಲಿ ನಿಧನರಾಗಿದ್ದಾರೆ ಎಂದು ಸ್ಟೇಟ್ ಮೀಡಿಯಾ ಕ್ಷಿನುವಾ ನ್ಯೂಸ್ ಏಜೆನ್ಸಿ ತಿಳಿಸಿದೆ.
ಚೈನೀಸ್ ಕಮ್ಯುನಿಷ್ಟ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರು, 1993ರಿಂದ 2003ರವರೆಗೆ ಚೀನಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಚೀನಾದ ಆರ್ಥಿಕತೆ ಮೇಲೆತ್ತಲು ಅವರು ಶ್ರಮವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.