ADVERTISEMENT

ಪಾಕ್‌: ಅಗ್ನಿ ಅವಘಡ– ಒಂದೇ ಕುಟುಂಬದ ಏಳು ಮಂದಿ ಸಾವು

ಪಿಟಿಐ
Published 7 ಅಕ್ಟೋಬರ್ 2022, 15:37 IST
Last Updated 7 ಅಕ್ಟೋಬರ್ 2022, 15:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಾಹೋರ್‌ (ಪಿಟಿಐ): ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು, ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಫೈಸಲಾಬಾದ್‌ ನಗರದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.

‘ಶಾರ್ಟ್‌ ಸರ್ಕೀಟ್‌ನಿಂದಾಗಿ ಶುಕ್ರವಾರ ಬೆಳಗಿನ ಜಾವದ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತು. ನಾಲ್ವರ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಬೆಂಕಿಯಿಂದ ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ತುರ್ತು ಸೇವಾ ಸಂಸ್ಥೆಯ ವಕ್ತಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT