
ಕೀವ್: ‘ಪುಟಿನ್ ಈ ಯುದ್ಧದಲ್ಲಿ ಗೆದ್ದಿಲ್ಲ ಮತ್ತು ಉಕ್ರೇನ್ ನಾಗರಿಕರ ಆತ್ಮವಿಶ್ವಾಸವನ್ನು ಕುಗ್ಗಿಸಿಲ್ಲ’ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಮಂಗಳವಾರ ಹೇಳಿದ್ದಾರೆ.
ಉಕ್ರೇನ್ –ರಷ್ಯಾ ನಡುವಿನ ಯುದ್ಧ ಆರಂಭಗೊಂಡು ನಾಲ್ಕು ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ಯುದ್ಧ ಆರಂಭವಾದಾಗಿನಿಂದ ಈವರೆಗೆ ನಾವು ನಮ್ಮ ಸ್ವಾತಂತ್ರ್ಯವನ್ನು, ರಾಷ್ಟ್ರ ಸ್ಥಾನಮಾನವನ್ನು ಬಿಟ್ಟುಕೊಟ್ಟಿಲ್ಲ’ ಎಂದಿದ್ದಾರೆ.
‘ರಷ್ಯಾದ ದೊಡ್ಡ ಹಾಗೂ ಸಮರ್ಥ ಸೇನೆಯ ದಾಳಿಯನ್ನು ಉಕ್ರೇನ್ ತಡೆದುಕೊಂಡಿದೆ. ಆದರೆ, ಎಂದಿಗೂ ನಾವು ನಮ್ಮ ಸ್ವಾತಂತ್ರ್ಯವನ್ನು ಬಿಟ್ಟುಕೊಟ್ಟಿಲ್ಲ. ನಮ್ಮನ್ನು ಧೃತಿಗೆಡಿಸಲು, ಯುದ್ಧವನ್ನು ಗೆಲ್ಲಲು ಪುಟಿನ್‌ಗೆ ಸಾಧ್ಯವಾಗಲಿಲ್ಲ’ ಎಂದು ಹೇಳಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ನಡೆದಿರುವ ಯುದ್ಧದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದು, ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ನೇತೃತ್ವದಲ್ಲಿ ಮಾತುಕತೆಯೂ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.