ADVERTISEMENT

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಫ್ರಾನ್ಸ್‌ ಬೆಂಬಲ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 14:28 IST
Last Updated 19 ನವೆಂಬರ್ 2022, 14:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಜರ್ಮನಿ, ಬ್ರೆಜಿಲ್ ಮತ್ತು ಜಪಾನ್‌ಗೆ ಕಾಯಂ ಸದಸ್ಯ ರಾಷ್ಟ್ರ ಸ್ಥಾನಮಾನ ನೀಡುವುದಕ್ಕೆ ಸಂಬಂಧಿಸಿ ಫ್ರಾನ್ಸ್‌ ತನ್ನ ಬೆಂಬಲವನ್ನು ಪುನರುಚ್ಚರಿಸಿದೆ.

‘ಈ ವಿಷಯದಲ್ಲಿ ಫ್ರಾನ್ಸ್‌ನ ನಿಲುವು ಅಚಲ. ಮಂಡಳಿಯು ಹೆಚ್ಚು ಪ್ರಾತಿನಿಧಿಕವಾಗಬೇಕು ಹಾಗೂ ಆ ಮೂಲಕ ಮತ್ತಷ್ಟೂ ಸದೃಢವಾಗಬೇಕು ಎಂದು ಫ್ರಾನ್ಸ್‌ ಬಯಸುತ್ತದೆ’ ಎಂದು ವಿಶ್ವಸಂಸ್ಥೆಯಲ್ಲಿ ಫ್ರಾನ್ಸ್‌ನ ಉಪ ಕಾಯಂ ಪ್ರತಿನಿಧಿ ನಥಾಲಿ ಬ್ರಾಡ್‌ಹರ್ಸ್ಟ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಸರ್ವಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

‘ಅನೇಕ ರಾಷ್ಟ್ರಗಳು ಹೊಸ ಶಕ್ತಿಗಳಾಗಿ ಹೊರಹೊಮ್ಮಿದ್ದು, ವಿಶ್ವಸಂಸ್ಥೆಯ ಭದ್ರತಾಮಂಡಳಿಯಲ್ಲಿ ಅವು ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಮರ್ಥವಾಗಿವೆ ಎಂಬುದನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು’ ಎಂದೂ ಅವರು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.