ADVERTISEMENT

ನೈಜೀರಿಯಾ | ಇಂಧನ ಟ್ಯಾಂಕರ್ ಸ್ಫೋಟ: 70 ಮಂದಿ ಸಾವು

ರಾಯಿಟರ್ಸ್
Published 19 ಜನವರಿ 2025, 5:17 IST
Last Updated 19 ಜನವರಿ 2025, 5:17 IST
<div class="paragraphs"><p>ನೈಜೀರಿಯಾದಲ್ಲಿ&nbsp; ಇಂಧನ ಟ್ಯಾಂಕರ್ ಸ್ಫೋಟ</p></div>

ನೈಜೀರಿಯಾದಲ್ಲಿ  ಇಂಧನ ಟ್ಯಾಂಕರ್ ಸ್ಫೋಟ

   

(ಚಿತ್ರ ಕೃಪೆ–@Reuters)

ಮೈದುಗುರಿ (ನೈಜೀರಿಯಾ): ಉತ್ತರ ನೈಜೀರಿಯಾದಲ್ಲಿ ಶನಿವಾರ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 70 ಜನ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ದೇಶದ ರಾಷ್ಟ್ರೀಯ ತುರ್ತು ಏಜೆನ್ಸಿ ತಿಳಿಸಿದೆ.

ADVERTISEMENT

ಕಳೆದ ಅಕ್ಟೋಬರ್‌ನಲ್ಲಿ ಜಿಗಾವಾ ರಾಜ್ಯದಲ್ಲಿ ಇದೇ ರೀತಿಯ ಸ್ಫೋಟ ಸಂಭವಿಸಿದ್ದು, 147 ಮಂದಿ ಸಾವಿಗೀಡಾಗಿದ್ದರು.

ವರದಿಗಳ ಪ್ರಕಾರ, ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, 56 ಜನ ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿವೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.