ADVERTISEMENT

ಜಿ20 ಅಧ್ಯಕ್ಷತೆ | ಮೋದಿ ಎಲ್ಲರನ್ನು ಒಟ್ಟಿಗೆ ಸೇರಿಸುತ್ತಾರೆ: ಫ್ರಾನ್ಸ್ ಅಧ್ಯಕ್ಷ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಡಿಸೆಂಬರ್ 2022, 3:07 IST
Last Updated 4 ಡಿಸೆಂಬರ್ 2022, 3:07 IST
ನರೇಂದ್ರ ಮೋದಿ ಮತ್ತು ಇಮ್ಯಾನ್ಯುಯೆಲ್‌ ಮ್ಯಾಕ್ರನ್
ನರೇಂದ್ರ ಮೋದಿ ಮತ್ತು ಇಮ್ಯಾನ್ಯುಯೆಲ್‌ ಮ್ಯಾಕ್ರನ್   

ನವದೆಹಲಿ: ಭಾರತ ಜಿ–20 ಗುಂಪಿನ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವುದಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್‌ ಮ್ಯಾಕ್ರನ್ ಸಂತಸ ವ್ಯಕ್ತಪಡಿಸಿದ್ದಾರೆ.

ಜಿ–20 ಅಧ್ಯಕ್ಷತೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಅವರು, ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ. ‘ಭಾರತಜಿ–20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಶಾಂತಿ ಮತ್ತು ಸುಸ್ಥಿರ ಜಗತ್ತನ್ನು ನಿರ್ಮಿಸಲು ನನ್ನ ಸ್ನೇಹಿತ ನರೇಂದ್ರ ಮೋದಿ ನಮ್ಮನೆಲ್ಲ ಒಟ್ಟಿಗೆ ಸೇರಿಸುತ್ತಾರೆ ಎಂದು ನಾನು ನಂಬುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಭಾರತ ಜಿ–20 ಗುಂಪಿನ ಅಧ್ಯಕ್ಷತೆಯನ್ನು ಗುರುವಾರ ವಹಿಸಿಕೊಂಡಿದೆ. ಅಧ್ಯಕ್ಷತೆ ಅವಧಿಯಲ್ಲಿ ಭಾರತದ 50ಕ್ಕೂ ಹೆಚ್ಚು ಪ್ರಮುಖ ನಗರಗಳ 32 ವಿವಿಧ ವಲಯಗಳಲ್ಲಿ 200 ಸಭೆಗಳನ್ನು ಆಯೋಜಿಸಲಾಗುತ್ತಿದೆ.

ADVERTISEMENT

ನವೆಂಬರ್‌ 16ರಂದು ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧ್ಯಕ್ಷತೆ ಹಸ್ತಾಂತರಿಸಿದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.