ADVERTISEMENT

G20 Summit 2023: ಸೆ.8ರಂದು ಮೋದಿ-ಬೈಡನ್ ಮಾತುಕತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಸೆಪ್ಟೆಂಬರ್ 2023, 4:52 IST
Last Updated 2 ಸೆಪ್ಟೆಂಬರ್ 2023, 4:52 IST
<div class="paragraphs"><p>ನರೇಂದ್ರ ಮೋದಿ ಹಾಗೂ ಜೋ ಬೈಡನ್</p></div>

ನರೇಂದ್ರ ಮೋದಿ ಹಾಗೂ ಜೋ ಬೈಡನ್

   

(ರಾಯಿಟರ್ಸ್ ಚಿತ್ರ)

ವಾಷಿಂಗ್ಟನ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಲ್ಗೊಳ್ಳಲಿದ್ದಾರೆ ಎಂದು ಶ್ವೇತಭವನವು ತಿಳಿಸಿದೆ.

ADVERTISEMENT

ಸೆಪ್ಟೆಂಬರ್ 7ರಂದು ಬೈಡನ್ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 8ರಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ಭಾರತ-ಅಮೆರಿಕ ಮೈತ್ರಿ ರಾಷ್ಟ್ರಗಳಾಗಿದ್ದು, ಮೋದಿ-ಬೈಡನ್ ಮಾತುಕತೆಯ ಮೂಲಕ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ವೃದ್ಧಿ ಗುರಿ ಇರಿಸಿಕೊಳ್ಳಲಾಗಿದೆ.

ಜಿ20 ಶೃಂಗಸಭೆ ಸೆಪ್ಟೆಂಬರ್ 9 ಹಾಗೂ 10ರಂದು ನವದೆಹಲಿಯಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.