ಜಿ7 ರಾಷ್ಟ್ರಗಳ ಒಕ್ಕೂಟ
–ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಜಿ7 ರಾಷ್ಟ್ರಗಳ ಒಕ್ಕೂಟವು ಇಸ್ರೇಲ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಇದೇ ವೇಳೆ ಮಧ್ಯಪ್ರಾಚ್ಯದಲ್ಲಿ ತನ್ನ ಪ್ರತಿಸ್ಪರ್ಧಿ ಇರಾನ್ ಅನ್ನು ಅಸ್ಥಿರತೆಯ ಮೂಲ ಎಂದು ಉಲ್ಲೇಖಿಸಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಕುರಿತು ಜಿ7 ರಾಷ್ಟ್ರಗಳ ಒಕ್ಕೂಟ ಸೋಮವಾರ ತಡರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದು, ಇರಾನ್‌ನಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವಂತೆ ಕರೆ ನೀಡಿದೆ.
ಇತ್ತ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮಂಗಳವಾರವೂ ಮುಂದುವರಿದಿದ್ದು, ಉಭಯ ದೇಶಗಳು ಪರಸ್ಪರರ ವಿರುದ್ಧ ವೈಮಾನಿಕ ದಾಳಿಗಳನ್ನು ನಡೆಸಿವೆ.
ಇಸ್ರೇಲ್ ಶುಕ್ರವಾರದಿಂದ ನಡೆಸಿರುವ ದಾಳಿಯಿಂದಾಗಿ ಇರಾನ್‌ನಲ್ಲಿ ಕನಿಷ್ಠ 224 ಜನರು ಮೃತಪಟ್ಟಿದ್ದಾರೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಇರಾನ್‌ನ ರಕ್ಷಣಾ ಕೇಂದ್ರಗಳು, ತೈಲ ಘಟಕಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಹಿರಿಯ ಮಿಲಿಟರಿ ಕಮಾಂಡರ್‌ಗಳು, ಪರಮಾಣು ವಿಜ್ಞಾನಿಗಳು ಮತ್ತು ನಾಗರಿಕರು ಅಸುನೀಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇಸ್ರೇಲ್‌ನ ಪ್ರಮುಖ ನಗರಗಳಾದ ಟೆಲ್ ಅವೀವ್, ಬೆನೆ ಬ್ರಾಕ್, ಪೆಟಾ ಟಿಕ್ವಾ ಮತ್ತು ಹೈಫಾ ನಗರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮ ಇಸ್ರೇಲ್‌ನಲ್ಲಿ ಸೋಮವಾರ 8 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರದಿಂದ ನಡೆದಿರುವ ದಾಳಿಯಲ್ಲಿ ಮೃತಪಟ್ಟ ಇಸ್ರೇಲಿಗರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.