ಭಾರತದ ಹೈಕಮಿಷನ್, ಲಂಡನ್
'ಎಕ್ಸ್' ಚಿತ್ರ
ಲಂಡನ್ (ಬ್ರಿಟನ್): ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿರುವ ಬಗ್ಗೆ ವರದಿಯಾಗಿದೆ.
ಈ ಘಟನೆಯನ್ನು ಲಂಡನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ತೀವ್ರವಾಗಿ ಖಂಡಿಸಿದೆ.
ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಗೂ ಮುನ್ನ ಈ ಘಟನೆ ನಡೆದಿದೆ.
ಗಾಂಧಿ ಪ್ರತಿಮೆಯಲ್ಲಿ ಗೀಚು ಬರಹದ ಮೂಲಕ ವಿರೂಪಗೊಳಿಸಲಾಗಿದೆ. ಈ ಸಂಬಂಧ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.
'ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿರುವ ಅವಮಾನಕರ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ' ಎಂದು ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದೆ.
'ಇದು ಕೇವಲ ಹಾನಿ ಮಾತ್ರವಲ್ಲ. ಬದಲಾಗಿ ಅಂತರರಾಷ್ಟ್ರೀಯ ಅಹಿಂಸಾ ದಿನಕ್ಕೆ ಮೊದಲು ಅಹಿಂಸೆಯ ಸಂದೇಶ ಸಾರಿದ್ದ ಗಾಂಧೀಜಿಯ ತತ್ವಗಳ ಮೇಲೆ ನಡೆದ ಹಿಂಸಾತ್ಮಕ ದಾಳಿಯಾಗಿದೆ' ಎಂದು ಖಂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.