ಸಾಂದರ್ಭಿಕ ಚಿತ್ರ
– ಎ.ಐ ಚಿತ್ರ
ಕೈರೊ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಸ್ತಾಪಿಸಿದ ಕದನ ವಿರಾಮದನ್ವಯ 7 ಒತ್ತೆಯಾಳುಗಳನ್ನು ಹಮಾಸ್ ಬಂಡುಕೋರರು ರೆಡ್ ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಿದ್ದಾರೆ. ಅವರ ಸ್ಥಿತಿಯ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಬಂದಿಲ್ಲ.
ಪ್ಯಾಲೆಸ್ಟೀನಿನ 1,900 ಕೈದಿಗಳ ಪರವಾಗಿ 20 ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿತ್ತು. ಅಲ್ಲದೆ ಬಿಡುಗಡೆಗೊಳಿಸುವ 20 ಒತ್ತೆಯಾಳುಗಳ ಹೆಸರುಗಳನ್ನು ಪ್ರಕಟಿಸಿತ್ತು.
ಒತ್ತೆಯಾಳುಗಳನ್ನು ರೆಡ್‌ಕ್ರಾಸ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು ಎಂದು ಇಸ್ರೇಲಿನ ಟಿವಿಗಳಲ್ಲಿ ಪ್ರಸಾರಗೊಳ್ಳುತ್ತಿದ್ದಂತೆಯೇ, ಕುಟುಂಬಸ್ಥರು ಸ್ನೇಹಿತರು ಕಣ್ಣೀರಾದರು. ನಾಗರಿಕರು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಒತ್ತೆಯಾಳುಗಳ ಹಸ್ತಾಂತರ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಅಳವಡಿಸಲಾಗಿದ್ದ ಪರದೆಯಲ್ಲಿ ಸಾವಿರಾರು ಇಸ್ರೇಲಿಗರು ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.