
ಪ್ರಜಾವಾಣಿ ವಾರ್ತೆ
ವಾಷಿಂಗ್ಟನ್: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಕದನ ವಿರಾಮ ಒಪ್ಪಂದದ ಭಾಗವಾಗಿ ರೂಪಿಸಿರುವ ‘ಶಾಂತಿ ಮಂಡಳಿ’ಗೆ ಕೆಲ ಸದಸ್ಯರನ್ನು ನೇಮಕ ಮಾಡಿದ್ದಾಗಿ ಶ್ವೇತಭವನ ಘೋಷಿಸಿದೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಅಳಿಯ ಜರೇಡ್ ಕುಶ್ನರ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರ ಹೆಸರುಗಳು ಈ ಪಟ್ಟಿಯಲ್ಲಿ ಸೇರಿವೆ. ಟ್ರಂಪ್ ಅವರು ಈ ಮಂಡಳಿ ಅಧ್ಯಕ್ಷರಾಗಿದ್ದಾರೆ.
ಟ್ರಂಪ್ ಅವರ ಶಾಂತಿ ಯೋಜನೆಗೆ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್‌ನ ಹಮಾಸ್ ಸಂಘಟನೆ ಕಳೆದ ಅಕ್ಟೋಬರ್‌ನಲ್ಲಿ ಸಹಿ ಹಾಕಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.