ಗಾಜಾದ ವಸತಿ ಕಟ್ಟಡದ ಮೇಲೆ ಇಸ್ರೇಲ್‌ನಿಂದ ವಾಯುದಾಳಿ
ದೀರ್ ಅಲ್–ಬಲಾಹ್ (ಗಾಜಾ ಪಟ್ಟಿ): ಕಳೆದ 21 ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದಾಗಿ ಮೃತಪಟ್ಟವರ ಸಂಖ್ಯೆ 59 ಸಾವಿರ ದಾಟಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.
2023ರ ಅಕ್ಟೋಬರ್ 7ರಂದು ಪ್ರಾರಂಭವಾದ ಯುದ್ಧದ ನಂತರ 59,029 ಜನರು ಹತರಾಗಿದ್ದು, 1,42,135 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.
ಸಚಿವಾಲಯವು ತಾನು ನೀಡಿರುವ ಮೃತರ ಅಂಕಿಅಂಶದಲ್ಲಿ ಅಗಲಿದ ನಾಗರಿಕರು ಮತ್ತು ಹೋರಾಟಗಾರರೆಷ್ಟು ಎಂಬ ಮಾಹಿತಿಯನ್ನು ಪತ್ಯೇಕವಾಗಿ ನೀಡಿಲ್ಲ. ಆದರೆ ಮೃತಪಟ್ಟವರಲ್ಲಿ ಅರ್ಧಕ್ಕಿಂತ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.