ಕರಾಚಿ: ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದ್ದರಿಂದ ಗೋಏರ್ ವಿಮಾನವು ಕರಾಚಿಯಲ್ಲಿ ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
‘ರಿಯಾದ್‌ನಿಂದ ಹೊರಟಿದ್ದ ಜಿ8–6658 ಸಂಖ್ಯೆಯ ವಿಮಾನವು ಬುಧವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಹೃದಯಾಘಾತಕ್ಕೊಳಗಾಗಿದ್ದ ಪ್ರಯಾಣಿಕನಿಗೆ ವಿಮಾನದಲ್ಲೇ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಿಮಾನದಲ್ಲಿ ಒಟ್ಟು179 ಪ್ರಯಾಣಿಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.