
ಜಮ್ಮು ಮತ್ತು ಕಾಶ್ಮೀರ
ಪಿಟಿಐ ಚಿತ್ರ
ನವದೆಹಲಿ: ಜಮ್ಮು ಕಾಶ್ಮೀರದಲ್ಲಿರುವ ಪಾಕಿಸ್ತಾನ ಪರ ಪ್ರತ್ಯೇಕತಾವಾದಿ ಸಂಘಟನೆ ‘ತೆಹ್ರೀಕ್ ಇ ಹುರಿಯತ್’ ನಿಷೇಧಿತ ಸಂಘಟನೆ ಎಂದು ಘೋಷಿಸಲು ಪೂರಕ ಆಧಾರವಿದೆ ಎಂಬುದನ್ನು ಪರಿಶೀಲಿಸಿ, ನಿರ್ಧರಿಸಲು ಕೇಂದ್ರ ಸರ್ಕಾರ ನ್ಯಾಯಮಂಡಳಿ ರಚಿಸಿದೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ದತ್ತಾ ನೇತೃತ್ವದಲ್ಲಿ ನ್ಯಾಯಮಂಡಳಿ ರಚನೆಯಾಗಿದೆ ಎಂದು ಸರ್ಕಾರ ಮಂಗಳವಾರ ಹೊರಡಿಸಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ.
ಇದು, ದೇಶವಿರೋಧಿ ಸಂಘಟನೆ ಎಂದು ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯ್ದೆ 1967ರ ಪ್ರಕಾರ ಕೇಂದ್ರ ಸರ್ಕಾರ ಈಗಾಗಲೇ ಐದು ವರ್ಷದ ಅವಧಿಗೆ ನಿಷೇಧ ಹೇರಿದೆ.
ಈ ಸಂಘಟನೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದೆ. ಭಾರತ ವಿರೋಧಿ ಪ್ರಚಾರಾಂದೋಲನದಲ್ಲಿ ತೊಡಗಿದೆ ಎಂದು ಸಂಘಟನೆ ನಿಷೇಧಕ್ಕೆ ಕೇಂದ್ರ ಸರ್ಕಾರ ಕಾರಣವನ್ನು ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.