ADVERTISEMENT

ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಟ್ರಂಪ್‌ ಯತ್ನ ಖಂಡಿಸಿ ಪ್ರತಿಭಟನೆ

ಪಿಟಿಐ
Published 18 ಜನವರಿ 2026, 4:37 IST
Last Updated 18 ಜನವರಿ 2026, 4:37 IST
<div class="paragraphs"><p>ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯತ್ನವನ್ನು ಖಂಡಿಸಿ ಡೆನ್ಮಾರ್ಕ್‌ನ ಕೋಪೆನ್‌ಹೆಗನ್‌ನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜನ</p></div>

ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯತ್ನವನ್ನು ಖಂಡಿಸಿ ಡೆನ್ಮಾರ್ಕ್‌ನ ಕೋಪೆನ್‌ಹೆಗನ್‌ನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜನ

   

ಕೋಪೆನ್‌ಹೆಗನ್‌: ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿ ಕೊಳ್ಳುವ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಯತ್ನವನ್ನು ವಿರೋಧಿಸಿ ಸಾವಿರಾರು ಜನರು ಡೆನ್ಮಾರ್ಕ್‌ನ ರಾಜಧಾನಿ ಕೋಪೆನ್‌ಹೆಗನ್‌ನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರು ಡೆನ್ಮಾರ್ಕ್‌ ಮತ್ತು ಗ್ರೀನ್‌ಲ್ಯಾಂಡ್‌ ಧ್ವಜ ಹಿಡಿದುಕೊಂಡಿದ್ದರಿಂದ ಕೋಪೆನ್‌ಹೆಗನ್‌ನ ರಸ್ತೆಗಳು ಕೆಂಪು ಮತ್ತು ಬಿಳಿ ಸಮುದ್ರದಂತೆ ಕಾಣುತ್ತಿತ್ತು. ಅಮೆರಿಕ ರಾಯಭಾರ ಕಚೇರಿಯವರೆಗೆ ನಡೆದ ಮೆರವಣಿಗೆಯುದ್ದಕ್ಕೂ ‘ಗ್ರೀನ್‌ಲ್ಯಾಂಡ್‌ ನಮ್ಮದು’ ಎಂಬ ಘೋಷಣೆಗಳು ಮೊಳಗಿದವು.

ADVERTISEMENT

ಕೋಪೆನ್‌ಹೆಗನ್‌, ಆರ್‌ಹಸ್‌, ಅಲ್‌ಬೋರ್ಗ್‌, ಒಡೆನ್ಸೆ ಮತ್ತು ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗುವ ಬಗ್ಗೆ ಸಾವಿರಾರು ಜನ ಸಾಮಾಜಿಕ ಜಾಲತಾಣದಲ್ಲಿ ಉತ್ಸಾಹ ತೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.