ADVERTISEMENT

ಜೋಹಾನ್ಸ್‌ಬರ್ಗ್‌ ಬೀದಿಯಲ್ಲಿ ಆಟವಾಡುತ್ತಿದ್ದವರ ಮೇಲೆ ಗುಂಡು: ನಾಲ್ವರ ಸಾವು

ಏಜೆನ್ಸೀಸ್
Published 18 ಜುಲೈ 2022, 2:14 IST
Last Updated 18 ಜುಲೈ 2022, 2:14 IST
   

ಜೋಹಾನ್ಸ್‌ಬರ್ಗ್‌: ಬೀದಿಯಲ್ಲಿ ಆಟವಾಡುತ್ತಿದ್ದ ಜನರ ಗುಂಪಿನ ಮೇಲೆ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ.

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಉಪನಗರದಲ್ಲಿ ಭಾನುವಾರ ಸಂಜೆ ಈ ಕೃತ್ಯ ನಡೆದಿದ್ದು, ಗುಂಡೇಟು ತಿಂದು ನಾಲ್ವರು ಮೃತರಾದರೆ, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗುಂಡು ಹಾರಿಸಿದ ಬಳಿಕ ಅಪರಿಚಿತ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ದಾಳಿಕೋರನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ವಾರದ ಹಿಂದೆ ದಕ್ಷಿಣ ಆಫ್ರಿಕಾದ ಲೆನಾಸಿಯದಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿ ಪ್ರಕರಣದಲ್ಲಿ 20 ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.