ADVERTISEMENT

ಪೇಶಾವರ: ಗುಂಡಿನ ದಾಳಿಗೆ ಬಲಿಯಾದ ನ್ಯಾಯಾಧೀಶರ ಕುಟುಂಬ

ಏಜೆನ್ಸೀಸ್
Published 4 ಏಪ್ರಿಲ್ 2021, 20:45 IST
Last Updated 4 ಏಪ್ರಿಲ್ 2021, 20:45 IST

ಪೇಶಾವರ: ವಾಯುವ್ಯ ಪಾಕಿಸ್ತಾನದ ಪೇಶಾವರ- ಇಸ್ಲಾಮಾಬಾದ್ ಹೆದ್ದಾರಿಯಲ್ಲಿ ಬಂದೂಕುಧಾರಿ ನಡೆಸಿದ ಗುಂಡಿನ ದಾಳಿಯಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯದ (ಎಟಿಸಿ) ನ್ಯಾಯಾಧೀಶರು, ಅವರ ಪತ್ನಿ ಮತ್ತು ಇಬ್ಬರು ಪುತ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶಅಫ್ತಾಬ್ ಅಫ್ರಿದಿ ಅವರ ಕುಟುಂಬ ಪ್ರಯಾಣಿಸುತ್ತಿದ್ದ ವಾಹನವನ್ನು ತಡೆದು ನಿಲ್ಲಿಸಿ, ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ದಾಳಿಯ ಹೊಣೆಯನ್ನು ಸದ್ಯಕ್ಕೆ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.