ADVERTISEMENT

ಪಾಕಿಸ್ತಾನ: ಗುಂಡಿನ ದಾಳಿಗೆ ಇಬ್ಬರು ಬಲಿ

ಪಿಟಿಐ
Published 11 ಸೆಪ್ಟೆಂಬರ್ 2024, 15:32 IST
Last Updated 11 ಸೆಪ್ಟೆಂಬರ್ 2024, 15:32 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪೇಶಾವರ: ಪಾಕಿಸ್ತಾನದ ನಿಷೇಧಿತ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬುಧವಾರ ಅಪರಿಚಿತ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಪೋಲಿಯೊ ಲಸಿಕೆ ಕಾರ್ಯಕರ್ತರೊಬ್ಬರು ಮತ್ತು ಒಬ್ಬರು ಪೊಲೀಸ್‌ ಸಾವಿಗೀಡಾಗಿದ್ದಾರೆ. 

ಬಜೌರ್‌ ಜಿಲ್ಲೆಯ ಸಾಲರ್ಜೈ ತೆಹ್ಸಿಲ್‌ ಪ್ರದೇಶದಲ್ಲಿ ಘಟನೆ ನಡೆದಿದೆ. ತಕ್ಷಣಕ್ಕೆ ಯಾವುದೇ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಇತ್ತೀಚೆಗೆ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪೋಲಿಯೊ ಲಸಿಕೆಯ ಕಾರ್ಯಕರ್ತರನ್ನೇ ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ. 

ADVERTISEMENT

ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಅಲಿ ಅಮಿನ್‌ ಗಂಡಪುರ್, ತಕ್ಷಣವೇ ದಾಳಿ ಕುರಿತ ವರದಿಯನ್ನು ನೀಡುವಂತೆ ಜಿಲ್ಲೆಯ ಪೊಲೀಸರಿಗೆ ಸೂಚಿಸಿದ್ದಾರೆ. 

ಈ ಬಾರಿ ರಾಷ್ಟ್ರೀಯ ಲಸಿಕಾ ಅಭಿಯಾನ ಆರಂಭವಾದಾಗಿನಿಂದ ಇದರ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.