ADVERTISEMENT

ಹ್ಯಾಲೊವೀನ್‌ ದಾಳಿ ಸಂಚು: ಹಲವರ ಬಂಧನ

ಏಜೆನ್ಸೀಸ್
Published 31 ಅಕ್ಟೋಬರ್ 2025, 16:06 IST
Last Updated 31 ಅಕ್ಟೋಬರ್ 2025, 16:06 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ವಾಷಿಂಗ್ಟನ್‌: ಹ್ಯಾಲೊವೀನ್‌ ವಾರಾಂತ್ಯದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪ ಮೇಲೆ ಹಲವರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಎಫ್‌ಬಿಐ ನಿರ್ದೇಶಕ ಕಾಶ್‌ ಪಟೇಲ್‌ ತಿಳಿಸಿದ್ದಾರೆ.

ADVERTISEMENT

ಬಂಧನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಎಫ್‌ಬಿಐ ನಗರದಾದ್ಯಂತ ಕಾರ್ಯಾಚರಣೆ ನಡೆಸಿ, ಸಮುದಾಯಕ್ಕೆ ಯಾವುದೇ ಬೆದರಿಕೆ ಇಲ್ಲ ಎಂಬ ಅರಿವು ಮೂಡಿಸಿದೆ ಎಂದು ಡಿಯರ್‌ಬಾರ್ನ್‌ ಪೊಲೀಸ್‌ ಇಲಾಖೆಯು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.