ಬೆಂಜಮಿನ್ ನೆತನ್ಯಾಹು
ಕೈರೊ: ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ರೂಪುರೇಷೆಗೆ ಇಸ್ರೇಲ್ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಶುಕ್ರವಾರ ಮುಂಜಾನೆ ತಿಳಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಕದನ ವಿರಾಮ ಒಪ್ಪಂದ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಜಾರಿಗೊಳಿಸುವಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ. ಒಪ್ಪಂದದ ಪ್ರಕಾರ ಹಮಾಸ್ ತನ್ನ ಬಳಿಯಿರುವ ಉಳಿದ ಎಲ್ಲ 20 ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲಿದ್ದು, ಅದಕ್ಕೆ ಪ್ರತಿಯಾಗಿ ಇಸ್ರೇಲ್ ನೂರಾರು ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಬಿಡುಗಡೆ ಮಾಡಲಿದೆ.
ಒತ್ತೆಯಾಳುಗಳನ್ನು ಬಿಡುಗಡೆ ಮಾಡುವತ್ತ ಗಮನ ಹರಿಸಲಾಗುತ್ತಿದೆ ಎಂದು ನೆತನ್ಯಾಹು ಕಚೇರಿ ಹೇಳಿಕೆಯಲ್ಲಿ ತಿಳಿಸಿದ್ದು, ಯುದ್ಧ ಕೊನೆಗೊಳಿಸಲು ಟ್ರಂಪ್ ಅವರು ಇತರ ಯೋಜನೆಗಳ ಬಗ್ಗೆ ಉಲ್ಲೇಖಿಸಿಲ್ಲ.
ಗಾಜಾದಲ್ಲಿ ಮೊದಲ ಹಂತದ ಶಾಂತಿ ಸ್ಥಾಪನೆ ಯೋಜನೆ ಜಾರಿಗೆ ಇಸ್ರೇಲ್ ಮತ್ತು ಹಮಾಸ್ ಬಂಡುಕೋರ ಸಂಘಟನೆ ಗುರುವಾರ ಒಪ್ಪಿಗೆ ಸೂಚಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.