ಡೊನಾಲ್ಡ್ ಟ್ರಂಪ್
– ರಾಯಿಟರ್ಸ್ ಚಿತ್ರ
ವಾಷಿಂಗ್ಟನ್: ವಿದೇಶಿ ವಿದ್ಯಾರ್ಥಿಗಳ ದಾಖಲು ಮಾಡದಂತೆ ಇವಿ ಲೀಗ್ ಸ್ಕೂಲ್‌ಗೆ ನಿರ್ಬಂಧ ಹೇರಿರುವ ಡೊನಾಲ್ಡ್ ಟ್ರಂಪ್ ಆಡಳಿತದ ನಿರ್ಧಾರವನ್ನು ಹಾರ್ವರ್ಡ್ ವಿಶ್ವವಿದ್ಯಾಲಯ ಪ್ರಶ್ನಿಸಿದೆ.
ಶ್ವೇತಭವನದ ರಾಜಕೀಯ ಬೇಡಿಕೆಗಳನ್ನು ತಿರಸ್ಕರಿಸಿದ್ದಕ್ಕೆ ಕೈಗೊಂಡ ಪ್ರತೀಕಾರದ ಕ್ರಮ ಇದಾಗಿದೆ ಎಂದು ಆರೋಪಿಸಿದೆ. ಬಾಸ್ಟನ್‌ನ ಫೆಡರಲ್ ಕೋರ್ಟ್‌ನಲ್ಲಿ ಈ ಬಗ್ಗೆ ಮೊಕದ್ದಮೆ ದಾಖಲಿಸಲಾಗಿದೆ.
ಸರ್ಕಾರದ ನಿರ್ಧಾರವು ಕಾಯ್ದೆಗೆ ವಿರುದ್ಧವಾಗಿದೆ. ಒಂದು ಆದೇಶದಿಂದ ವಿದ್ಯಾರ್ಥಿಗಳ ಸಂಖ್ಯೆಯನ್ನು ಶೇ 25ರಷ್ಟು ಕಡಿತಗಳಿಸಲು ಸರ್ಕಾರ ಮುಂದಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.
ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ 100ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಸೇರಿದ 6,800ಕ್ಕೂ ಅಧಿಕ ವಿದೇಶಿ ವಿದ್ಯಾರ್ಥಿಗಳು ದಾಖಲಾಗುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.