ADVERTISEMENT

ಬಾಂಗ್ಲಾ ಪರಿಸ್ಥಿತಿಗೆ ಯೂನುಸ್‌ ಕಾರಣ: ಹಸೀನಾ

ಪಿಟಿಐ
Published 4 ಡಿಸೆಂಬರ್ 2024, 23:30 IST
Last Updated 4 ಡಿಸೆಂಬರ್ 2024, 23:30 IST
ಶೇಖ್‌ ಹಸೀನಾ
ಶೇಖ್‌ ಹಸೀನಾ   

ನವದೆಹಲಿ: ‘ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆ ಮಾಡುವಲ್ಲಿ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನುಸ್‌ ವಿಫಲರಾಗಿದ್ದು, ಬಾಂಗ್ಲಾದೇಶದ ಸದ್ಯದ ಪರಿಸ್ಥಿತಿಗೆ ಅವರೇ ಕಾರಣ’ ಎಂದು ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ‘ನರಹತ್ಯೆ’ಗೆ ಯೂನುಸ್‌ ಅವರೇ ಹೊಣೆ’ ಎಂದೂ ಆರೋಪಿಸಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ತಮ್ಮ ಬೆಂಬಲಿಗರನ್ನು ಉದ್ಧೇಶಿಸಿ ವರ್ಚುವಲ್‌ ಆಗಿ ಮಾತನಾಡಿದ ಅವರು, ‘ನಮ್ಮ ತಂದೆ ಶೇಖ್‌ ಮುಜಿಬುರ್‌ ರೆಹಮಾನ್‌ ಅವರನ್ನು 1975ರಲ್ಲಿ ಹತ್ಯೆ ಮಾಡಲಾಗಿತ್ತು. ಅದೇ ರೀತಿಯಲ್ಲಿಯೇ ನನ್ನನ್ನು, ನನ್ನ ಸಹೋದರಿ ಶೇಖ್‌ ರೆಹಾನಾಳನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು’ ಎಂದು ಆರೋಪಿಸಿದ್ದಾರೆ.

ADVERTISEMENT

‘ಯೂನುಸ್‌ ಒಬ್ಬ ಅಧಿಕಾರ ದಾಹಿ’ ಎಂದು ಟೀಕಿಸಿದ ಅವರು, ‘ಬಾಂಗ್ಲಾದೇಶದಲ್ಲಿನ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದೆ. ದೇಶದಲ್ಲಿ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಸ್ತುತ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.