ಪೊಜಾ ರಿಕಾ (ಮೆಕ್ಸಿಕೊ): ನಿರಂತರವಾಗಿ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಮೆಕ್ಸಿಕೊದಲ್ಲಿ 41 ಮಂದಿ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯು ಮುಂದುವರಿದಿದೆ.
ಅ.6ರಿಂದ 9ರವರೆಗೆ 540 ಮಿ.ಮೀ (21 ಇಂಚಿಗಿಂತ ಅಧಿಕ) ಮಳೆ ಸುರಿದಿದೆ. ಕಾಣೆಯಾಗಿರುವ ಹಲವಾರು ಮಂದಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಶನಿವಾರ 20ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 16,000ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. 150ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ರಸ್ತೆಗಳು ಹಾಗೂ ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಭೂಕುಸಿತದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.