ADVERTISEMENT

ಇಂಡೊನೇಷ್ಯಾ: ಭಾರಿ ಮಳೆಯಿಂದಾಗಿ ಪ್ರವಾಹ, 44 ಮಂದಿ ಸಾವು

ಏಜೆನ್ಸೀಸ್
Published 4 ಏಪ್ರಿಲ್ 2021, 17:26 IST
Last Updated 4 ಏಪ್ರಿಲ್ 2021, 17:26 IST
ಪೂರ್ವ ಇಂಡೊನೇಷ್ಯಾದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂ ಕುಸಿತ ಮತ್ತು ಪ್ರವಾಹದಲ್ಲಿ ನಾಶವಾಗಿರುವ ಮನೆಗಳು                            –ಎಎಫ್‌ಪಿ ಚಿತ್ರ
ಪೂರ್ವ ಇಂಡೊನೇಷ್ಯಾದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂ ಕುಸಿತ ಮತ್ತು ಪ್ರವಾಹದಲ್ಲಿ ನಾಶವಾಗಿರುವ ಮನೆಗಳು                            –ಎಎಫ್‌ಪಿ ಚಿತ್ರ   

ಜಕಾರ್ತಾ: ಪೂರ್ವ ಇಂಡೊನೇಷ್ಯಾದಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಭೂ ಕುಸಿತ ಮತ್ತು ಪ್ರವಾಹ ದಲ್ಲಿ 44 ಮಂದಿ ಸಾವಿಗೀಡಾಗಿದ್ದಾರೆ.

ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಭಾನುವಾರ ತಿಳಿಸಿದೆ.

ಅತಿ ಹೆಚ್ಚು ಹಾನಿ ಸಂಭವಿಸಿರುವ ಪೂರ್ವ ನುಸಾ ತೆಂಗರಾ ಪ್ರಾಂತ್ಯದ ಈಸ್ಟ್‌ ಫ್ಲಾರೆಸ್‌ ರೆಜೆನ್ಸಿನಲ್ಲೇ 44 ಮಂದಿ ಸಾವಿಗೀಡಾಗಿದ್ದಾರೆ. ಇನ್ನೂ ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಹಲವೆಡೆ ಸೇತುವೆಗಳು ಮತ್ತು ರಸ್ತೆಗಳು ಕೊಚ್ಚಿ ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.