ADVERTISEMENT

ಖಮೇನಿ ಹತ್ಯೆಗೆ ಪ್ರತೀಕಾರ: ಇಸ್ರೇಲ್ ಮೇಲೆ ಹಿಜ್ಬುಲ್ಲಾ ಕ್ಷಿಪಣಿ, ಡ್ರೋನ್ ದಾಳಿ

ಏಜೆನ್ಸೀಸ್
Published 2 ಮಾರ್ಚ್ 2026, 3:29 IST
Last Updated 2 ಮಾರ್ಚ್ 2026, 3:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಎ.ಐ ಚಿತ್ರ

ಬೈರೂತ್: ಅಯತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ಹೇಳಿದೆ.

ADVERTISEMENT

ಭಾನುವಾರ ರಾತ್ರಿ ದಾಳಿ ನಡೆಸಲಾಗಿದೆ ಎಂದು ಅದು ಹೇಳಿದೆ.

ಈ ದಾಳಿಗೆ ಇಸ್ರೇಲ್ ಕೂಡ ಪ್ರತ್ಯುತ್ತರ ನೀಡಿದ್ದು, ಲೆಬನಾನ್ ರಾಜಧಾನಿ ಬೈರೂತ್ ಮೇಲೆ ದಾಳಿ ನಡೆಸಿದೆ.

ಅಯತೊಲ್ಲಾ ಇಮಾಮ್ ಸಯ್ಯದ್ ಅಲಿ ಅಲ್-ಹುಸೇನಿ ಖಮೇನಿ ಅವರ ಪವಿತ್ರ ರಕ್ತಕ್ಕೆ ಪ್ರತೀಕಾರವಾಗಿ, ಲೆಬನಾನ್ ಹಾಗೂ ಅಲ್ಲಿನ ಜನರ ರಕ್ಷಣೆಗಾಗಿ, ಹಾಗೆಯೇ ಇಸ್ರೇಲ್‌ನ ಸರಣಿ ದಾಳಿಗಳಿಗೆ ಪ್ರತಿಯಾಗಿ ಇಸ್ರೇಲ್ ಮೇಲೆ ಕ್ಷಿಪಣಿಗಳ ಸುರಿಮಳೆ ಮತ್ತು ಡ್ರೋನ್‌ಗಳ ದಾಳಿ ನಡೆಸಲಾಗಿದೆ ಎಂದು ಹಿಜ್ಬುಲ್ಲಾ ಪ್ರಕಟಣೆಯಲ್ಲಿ ತಿಳಿಸಿದೆ.

ಬೈರೂತ್‌ನ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ಇಸ್ರೇಲ್ ಸೋಮವಾರ ದಾಳಿ ನಡೆಸಿದೆ ಎಂದು ಲೆಬನಾನ್ ಮಾಧ್ಯಮಗಳು ವರದಿ ಮಾಡಿವೆ.

(ಮೂಲ: ವಿವಿಧ ಸುದ್ದಿ ಏಜೆನ್ಸಿಗಳ ವರದಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.