ADVERTISEMENT

ಹಿಜಾಬ್ ವಿವಾದ; ಪ್ರಚೋದಿತ ಹೇಳಿಕೆ ಸ್ವಾಗತಾರ್ಹವಲ್ಲ: ವಿದೇಶಗಳಿಗೆ ಭಾರತ ತಿರುಗೇಟು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಫೆಬ್ರುವರಿ 2022, 6:26 IST
Last Updated 12 ಫೆಬ್ರುವರಿ 2022, 6:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಉಂಟಾಗಿರುವ ಹಿಜಾಬ್ ವಿವಾದದ ಕುರಿತು ಕೆಲವು ದೇಶಗಳು ಕಳವಳ ವ್ಯಕ್ತಪಡಿಸಿರುವ ಬಗ್ಗೆ ಉತ್ತರ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ದೇಶದ ಆಂತರಿಕ ಸಮಸ್ಯೆಗಳ ಕುರಿತು ಪ್ರಚೋದಿತ ಹೇಳಿಕೆಗಳು ನೀಡುವುದು ಸ್ವಾಗತಾರ್ಹವಲ್ಲ ಎಂದು ತಿರುಗೇಟು ನೀಡಿದ್ದಾರೆ.

'ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಅರಿಂದಮ್, ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆಗೆ ಸಂಬಂಧಿಸಿದ ವಿಷಯವು ಗೌರವಾನ್ವಿತ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಂಗ ವಿಚಾರಣೆ ಹಂತದಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟು, ಕಾರ್ಯವಿಧಾನಗಳು ಮತ್ತು ನಮ್ಮ ಪ್ರಜಾಸತ್ತಾತ್ಮಕ ನೀತಿ ಹಾಗೂ ಆಡಳಿತ ವ್ಯವಸ್ಥೆಗಳ ಮೂಲಕ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲಾಗುತ್ತದೆ' ಎಂದು ಹೇಳಿದ್ದಾರೆ.

'ಭಾರತವನ್ನು ಚೆನ್ನಾಗಿ ಅರಿತುಕೊಂಡವರು ಈ ವಾಸ್ತವಾಂಶಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಕುರಿತು ಪ್ರಚೋದಿತಹೇಳಿಕೆಗಳು ಸ್ವಾಗತಾರ್ಹವಲ್ಲ' ಎಂದು ಹೇಳಿದ್ದಾರೆ.

ಕರ್ನಾಟಕದ ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಕರ್ನಾಟಕದ ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಅಮೆರಿಕ ಹೇಳಿದೆ.

ಈ ಕುರಿತು ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನ, ಭಾರತದ ರಾಜತಾಂತ್ರಿಕ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯದಲ್ಲಿ ಸಮನ್ಸ್ ಜಾರಿಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.