ADVERTISEMENT

ಹಾಂಗ್‌ಕಾಂಗ್‌ ಅಗ್ನಿ ದುರಂತ: ತನಿಖೆಗೆ ಸಮಿತಿ ರಚನೆ

ಏಜೆನ್ಸೀಸ್
Published 2 ಡಿಸೆಂಬರ್ 2025, 13:53 IST
Last Updated 2 ಡಿಸೆಂಬರ್ 2025, 13:53 IST
   

ಹಾಂಗ್‌ಕಾಂಗ್‌: ಹಾಂಗ್‌ಕಾಂಗ್‌ನ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಕುರಿತು ತನಿಖೆ ನಡೆಸುವ ಸಲುವಾಗಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸಲು ಸ್ಥಳೀಯ ಆಡಳಿತ ನಿರ್ಧರಿಸಿದೆ.

ಈ ಸಮಿತಿಯು ದುರಂತದ ಕಾರಣವನ್ನು ಪತ್ತೆಮಾಡಲು ಮತ್ತು ಮುಂದೆ ಈ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲಿದೆ ಎಂದು ಹಾಂಗ್‌ಕಾಂಗ್‌ನ ಕಾರ್ಯನಿರ್ವಾಹಕ ಮುಖ್ಯಸ್ಥ ಜಾನ್‌ ಲೀ ತಿಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 14 ಜನರನ್ನು ಬಂಧಿಸಲಾಗಿದೆ’ ಎಂದು ಲೀ ತಿಳಿಸಿದ್ದಾರೆ.

ADVERTISEMENT

ದುರಂತದಲ್ಲಿ ಕನಿಷ್ಠ 156 ಜನರು ಮೃತಪಟ್ಟಿದ್ದು, 40 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇನ್ನೂ 30 ಜನರು ನಾಪತ್ತೆಯಾಗಿದ್ದಾರೆ.

ಕಳೆದ ಬುಧವಾರ ಮಧ್ಯಾಹ್ನ ವಾಂಗ್ ಫುಕ್ ಕೋರ್ಟ್‌ ಎಂಬ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಇತರ ಏಳು ಕಟ್ಟಡಗಳಿಗೂ ವ್ಯಾಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.