
ಪ್ರಜಾವಾಣಿ ವಾರ್ತೆ
ಎಪಿ
ಹಾಂಗ್‌ಕಾಂಗ್: ಹಾಂಗ್‌ಕಾಂಗ್‌ನ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 128ಕ್ಕೆ ಏರಿಕೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶುಕ್ರವಾರವೂ ಶೋಧ ಕಾರ್ಯಾಚರಣೆ ನಡೆಸಿದರು.
ಸುಟ್ಟು ಕರಕಲಾದ ಕಟ್ಟಡಗಳಲ್ಲಿ ಮತ್ತಷ್ಟು ಮೃತದೇಹಗಳು ಪತ್ತೆಯಾಗಿದ್ದು, ಶೋಧಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಬುಧವಾರ ಮಧ್ಯಾಹ್ನ ವಾಂಗ್ ಫುಕ್ ಕೋರ್ಟ್ ಎಂಬ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಇತರ ಏಳು ಕಟ್ಟಡಗಳಿಗೂ ವ್ಯಾಪಿಸಿತ್ತು. 1000ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಸತತ 24 ತಾಸು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ರಕ್ಷಣೆ ಮತ್ತು ಶೋಧ ಕಾರ್ಯಾಚರಣೆಯು ಶುಕ್ರವಾರ ರಾತ್ರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.