ಹಾಂಗ್‌ಕಾಂಗ್: ಪ್ರಜಾಪ್ರಭುತ್ವ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಹಾಗೂ ಪೊಲೀಸರ ದೌರ್ಜನ್ಯ ಖಂಡಿಸಿ ಸೋಮವಾರವೂ ಇಲ್ಲಿ ಪ್ರತಿಭಟನೆ ಮುಂದುವರಿದಿದ್ದು, ವಿಮಾನ ಸಂಚಾರ ಸ್ಥಗಿತಗೊಂಡಿದೆ.
ಹಾಂಗ್‌ಕಾಂಗ್ ವಿಮಾನ ನಿಲ್ದಾಣ ದಲ್ಲಿ ನಡೆದ ಪ್ರತಿಭಟನೆಯಲ್ಲಿಐದು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಹೊರಡಲು ಸಿದ್ಧವಾದ ವಿಮಾನ ಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಿಮಾನಗಳ ಸಂಚಾರವನ್ನು ರದ್ದುಗೊಳಿ ಸಲಾಗಿದೆ’ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.