ವಾಷಿಂಗ್ಟನ್: ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ನಮ್ಮ ಪಕ್ಷ ಆಯ್ಕೆಯಾದರೆ, ಭಾರತದ ಎಲ್ಲ ಹೋರಾಟಗಳಿಗೂ ನೆರವು ನೀಡುವುದರ ಜತೆಗೆ, ದ್ವಿಪಕ್ಷೀಯ ಸಂಬಂಧವನ್ನೂ ಇನ್ನಷ್ಟು ಬಲಗೊಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಡೆಮಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೊ ಬಿಡೆನ್ ಭರವಸೆ ನೀಡಿದ್ದಾರೆ.
ಅಮೆರಿಕದಲ್ಲಿರುವ ಭಾರತೀಯ ಸಮುದಾಯದವರು ಆಯೋಜಿಸಿದ್ದ 74ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಅಮೆರಿಕ ಮತ್ತು ಭಾರತದ ದ್ವಿಪಕ್ಷೀಯ ಸಂಬಂಧ ಗಟ್ಟಿಯಾದರೆ, ವಿಶ್ವವೇ ಸುರಕ್ಷಿತವಾಗಿರುತ್ತದೆ’ ಎಂದು ಇದೇ ವೇಳೆ ಬಿಡೆನ್ ಹೇಳಿದರು.
‘ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ವಿಸ್ತರಿಸುವ ನಿಟ್ಟಿನಲ್ಲಿ ನಮ್ಮ ಆಡಳಿತ ಕೆಲಸ ಮಾಡಲಿದೆ. ಹವಾಮಾನ ಬದಲಾವಣೆ ಮತ್ತು ಆರೋಗ್ಯ ಸುರಕ್ಷತೆಯಂತಹ ಜಾಗತಿಕ ಸವಾಲುಗಳನ್ನು ಎದುರಿಸಲು ನಮ್ಮ ಆಡಳಿತ ಸಿದ್ಧವಿದೆ’ ಎಂದು ಬಿಡೆನ್ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.