
ಸೈಬರ್ ವಂಚನೆ
ನ್ಯೂಯಾರ್ಕ್: ಅಕ್ರಮವಾಗಿ ಆನ್‌ಲೈನ್ ಮೂಲಕ ಔಷಧ ಮಾರಾಟ ಮಾಡುತ್ತಿತ್ತು ಎನ್ನಲಾದ ಭಾರತದ ಸಂಸ್ಥೆಯ ಜೊತೆ ನಂಟು ಹೊಂದಿರುವ 200ಕ್ಕೂ ಹೆಚ್ಚು ವೆಬ್‌ಸೈಟ್‌ಗಳನ್ನು ಅಮೆರಿಕದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಸಂಸ್ಥೆಯು ಆನ್‌ಲೈನ್ ಮೂಲಕ ಮಾರಾಟ ಮಾಡುತ್ತಿದ್ದ ಔಷಧಗಳನ್ನು ಸೇವಿಸಿದವರ ಪೈಕಿ 6 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ ಎಂಬ ಆರೋಪಗಳಿವೆ ಎಂದು ಅಮೆರಿಕದ ಡ್ರಗ್ ಜಾರಿ ಆಡಳಿತ(ಡಿಇಎ) ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಇಎ ಅಧಿಕಾರಿಗಳು ದೇಶಾದ್ಯಂತ ಕಾರ್ಯಾಚರಣೆಗಳನ್ನು ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ ಎಂದೂ ತಿಳಿಸಿದ್ದಾರೆ.
2022ರಿಂದಲೂ ಈ ಅಕ್ರಮ ಜಾಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಭಾಗಿಯಾಗಿರುವ ಸಂಸ್ಥೆಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಭಾರತ ಸರ್ಕಾರ ಮತ್ತು ಅಲ್ಲಿನ ಕಾನೂನು ಜಾರಿ ಸಂಸ್ಥೆಗಳ ಜತೆಗೂ ನಿಕಟ ಸಂಪರ್ಕದಲ್ಲಿ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.