ADVERTISEMENT

ಟ್ರಂಪ್‌ ಮಧ್ಯಸ್ಥಿಕೆಗೆ ಇಮ್ರಾನ್‌ ಒತ್ತಾಯ

ಪಿಟಿಐ
Published 4 ಆಗಸ್ಟ್ 2019, 16:13 IST
Last Updated 4 ಆಗಸ್ಟ್ 2019, 16:13 IST
   

ಇಸ್ಲಾಮಾಬಾದ್‌: ಪಾಕಿಸ್ತಾನ ಪ‍್ರಧಾನಿ ಇಮ್ರಾನ್‌ ಖಾನ್‌ ಅವರು ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಸಿದ್ದಾರೆ. ಗಡಿಯಲ್ಲಿನ ಪ್ರಕ್ಷುಬ್ಧ ಸ್ಥಿತಿ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ರಕ್ಷಣಾ ಸಚಿವ ಪರ್ವೇಜ್‌ ಖಟ್ಟಕ್‌, ವಿದೇಶಾಂಗ ಸಚಿವ ಶಾ ಮೆಹಮೂದ್‌ ಖುರೇಷಿ, ಸೇನಾ ಮುಖ್ಯಸ್ಥ ಖಮರ್‌ ಜಾವೇದ್‌ ಬಾಜ್ವಾ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಫ್‌ ಅವರು ಕಾಶ್ಮೀರದ ವಿವಾದ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಬೇಕು ಎಂದು ಇಮ್ರಾನ್‌ ಟ್ವೀಟ್‌ ಮಾಡಿದ್ದಾರೆ.

‘ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಟ್ರಂಪ್‌ ಹೇಳಿದ್ದರು. ಕಾಶ್ಮೀರ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ. ಹಾಗಾಗಿ ಮಧ್ಯಸ್ಥಿಕೆಗೆ ಇದು ಸಕಾಲ’ ಎಂದು ಅವರು ಹೇಳಿದ್ದಾರೆ.

ADVERTISEMENT

ಕಾಶ್ಮೀರ ವಿವಾದ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇಳಿಕೊಂಡಿದ್ದಾರೆ ಎಂದು ಟ್ರಂಪ್‌ ಅವರು ಕಳೆದ ತಿಂಗಳು ಹೇಳಿಕೆ ನೀಡಿದ್ದರು. ಆದರೆ, ಭಾರತ ಈ ಹೇಳಿಕೆಯನ್ನು ಅಲ್ಲಗಳೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.