ADVERTISEMENT

ಇಮ್ರಾನ್‌ ಖಾನ್‌ ಜಾಮೀನು ಅರ್ಜಿ ಮುಂದೂಡಿದ ಪಾಕ್‌ ಸುಪ್ರೀಂ ಕೋರ್ಟ್‌

ಪಿಟಿಐ
Published 29 ಜುಲೈ 2025, 10:19 IST
Last Updated 29 ಜುಲೈ 2025, 10:19 IST
   

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ಅವರ ಜಾಮೀನು ಅರ್ಜಿಯನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಆಗಸ್ಟ್‌ 12ಕ್ಕೆ ಮುಂದೂಡಿದೆ.

2023ರ ಮೇ 9ರಂದು ನಡೆದ ಗಲಭೆ ಪ್ರಕರಣದಲ್ಲಿ ಇಮ್ರಾನ್‌ ಖಾನ್‌ ಅವರು ಜೈಲು ಪಾಲಾಗಿದ್ದಾರೆ.

ಪಾಕಿಸ್ತಾನ್ ತೆಹ್ರೀಕ್‌ ಎ ಇನ್ಸಾಫ್‌ ಪಕ್ಷದ ಅಧ್ಯಕ್ಷರಾದ ಇಮ್ರಾನ್‌ ಖಾನ್‌ ಅವರ ಮೇಲೆ ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಿವೆ. ಅದರಲ್ಲೂ 2023ರ ಮೇ 9ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರುವಾಗ ಪಕ್ಷದ ಕಾರ್ಯಕರ್ತರಿಗೆ ಸರ್ಕಾರಿ ಹಾಗೂ ಸೇನಾ ಕಚೇರಿಗಳ ಮೇಲೆ ದಾಳಿ ನಡೆಸುವಂತೆ ಕರೆ ಕೊಟ್ಟಿದ್ದು, ಗಲಭೆಗೆ ಕಾರಣವಾಗಿತ್ತು.

ADVERTISEMENT

ಕಳೆದ ತಿಂಗಳು ಇದೇ ಪ್ರಕರಣದಲ್ಲಿ ಲಾಹೋರ್ ಹೈಕೋರ್ಟ್, ಇಮ್ರಾನ್‌ ಖಾನ್‌ಗೆ ಜಾಮೀನು ನಿರಾಕರಿಸಿತ್ತು. ಹಾಗಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

72 ವರ್ಷದ ಇಮ್ರಾನ್‌ ಖಾನ್‌ ಅವರು 2022ರ ಏಪ್ರೀಲ್‌ವರೆಗೆ ಪಾಕಿಸ್ತಾನದ ಪ್ರಧಾನಿಯಾಗಿದ್ದರು. ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅವರು 2023 ಆಗಸ್ಟ್‌ನಿಂದ ರಾವಲ್ಪಿಂಡಿಯ ಕಾರಾಗೃಹದಲ್ಲಿದ್ದಾರೆ. ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ನಂತರ ಅವರ ವಿರುದ್ದ ಭ್ರಷ್ಟಾಚಾರ ಆರೋಪ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.