ADVERTISEMENT

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿ: ಇಮ್ರಾನ್‌

ಪಿಟಿಐ
Published 18 ಜುಲೈ 2022, 11:35 IST
Last Updated 18 ಜುಲೈ 2022, 11:35 IST
ಇಮ್ರಾನ್‌ ಖಾನ್‌
ಇಮ್ರಾನ್‌ ಖಾನ್‌   

ಲಾಹೋರ್‌: ಪಾಕಿಸ್ತಾನದಲ್ಲಿ ಮತ್ತೆ ಸಾರ್ವತ್ರಿಕ ಚುನಾವಣೆ ನಡೆಯಲಿ ಎಂದುಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಆಗ್ರಹಿಸಿದ್ದಾರೆ.

ಪಂಜಾಬ್ ಪ್ರಾಂತ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಪಾಕಿಸ್ತಾನ್‌ ತೆಹ್ರಿಕ್‌–ಎ–ಇನ್ಸಾಫ್‌ (ಪಿಟಿಐ) ಪಕ್ಷವು ಆಡಳಿತಾರೂಢ ಪಾಕಿಸ್ತಾನ ಮುಸ್ಲಿಂ ಲೀಗ್‌ ಪಕ್ಷವನ್ನು ಸೋಲಿಸಿದ ಬಳಿಕ ಇಮ್ರಾನ್‌ ಅವರು ಚುನಾವಣೆಗೆ ಒತ್ತಾಯಿಸಿದ್ದಾರೆ.

ಪಂಜಾಬ್ ಪ್ರಾಂತ್ಯದಲ್ಲಿ ಇಮ್ರಾನ್‌ ಪಕ್ಷ ಗೆಲುವು ಸಾಧಿಸಿರುವುದರಿಂದ ಪ್ರಧಾನಿ ಶಹಬಾಜ್ ಷರೀಫ್ ಅವರಿಗೆ ಹಿನ್ನಡೆಯುಂಟಾಗಿದೆ. ಅವರ ಮಗ ಹಮ್ಜಾಶಹಬಾಜ್ ಅವರು ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ADVERTISEMENT

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಜುಲೈ 22ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಪಿಟಿಐ-ಪಿಎಂಎಲ್‌ಕ್ಯೂ ಜಂಟಿ ಅಭ್ಯರ್ಥಿ ಚೌಧರಿ ಪರ್ವೇಜ್‌ ಇಲಾಹಿ ಅವರು ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.