ADVERTISEMENT

ಇನ್ನೆಂದೂ ಚುನಾವಣೆಯಲ್ಲಿ ಸ್ಪರ್ಧಿಸದಂತೆ ‘ಅನರ್ಹತೆ ಭೀತಿಯಲ್ಲಿ ಇಮ್ರಾನ್‌ ಖಾನ್‌

ಪಿಟಿಐ
Published 4 ಆಗಸ್ಟ್ 2022, 16:17 IST
Last Updated 4 ಆಗಸ್ಟ್ 2022, 16:17 IST
ಇಮ್ರಾನ್‌ ಖಾನ್‌
ಇಮ್ರಾನ್‌ ಖಾನ್‌   

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಅನರ್ಹತೆಯ ಭೀತಿ ಎದುರಿಸುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ಗುರುವಾರ ವರದಿ ಮಾಡಿದೆ.

‘ಇಮ್ರಾನ್‌ ಅವರು ಆಸ್ತಿ ಘೋಷಣೆ ವೇಳೆ ‘ತೋಷಖಾನ’ದಿಂದ (ಸರ್ಕಾರಿ ಖಜಾನೆ) ಸ್ವೀಕರಿಸಿರುವ ಉಡುಗೊರೆಗಳ ಕುರಿತ ಮಾಹಿತಿ ಬಹಿರಂಗಪಡಿಸಿಲ್ಲ. ಹೀಗಾಗಿ ಸಂವಿಧಾನದ 62 (1)(ಎಫ್‌) ವಿಧಿ ಅಡಿಯಲ್ಲಿ ಬದುಕಿರುವವರೆಗೂ ಚುನಾವಣೆಗೆ ಸ್ಪರ್ಧಿಸದಂತೆ ಅವರ ಮೇಲೆ ನಿರ್ಬಂಧ ಹೇರಬೇಕು ಎಂದು ಆಡಳಿತರೂಢ ಪಾಕಿಸ್ತಾನ ಡೆಮಾಕ್ರಟಿಕ್‌ ಮೂವ್‌ಮೆಂಟ್‌ (ಪಿಡಿಎಂ) ಚುನಾವಣಾ ಆಯೋಗಕ್ಕೆ ದೂರು ನೀಡಿದೆ’ ಎಂದು ಎಕ್ಸ್‌ಪ್ರೆಸ್‌ ಟ್ರಿಬ್ಯೂನಲ್‌ ಪತ್ರಿಕೆಯು ವರದಿಯಲ್ಲಿ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT