ADVERTISEMENT

ಸೇನಾ ನ್ಯಾಯಾಲಯದಲ್ಲಿ ಇಮ್ರಾನ್‌ ವಿಚಾರಣೆ ಸಾಧ್ಯತೆ: ರಕ್ಷಣಾ ಸಚಿವ

ಪಿಟಿಐ
Published 4 ಜೂನ್ 2023, 14:39 IST
Last Updated 4 ಜೂನ್ 2023, 14:39 IST
   

ಇಸ್ಲಾಮಾಬಾದ್‌: ತೆಹ್ರೀಕ್ –ಎ– ಇನ್ಸಾಫ್‌ (ಪಿಟಿಐ) ‌ಕಾರ್ಯಕರ್ತರು ಮೇ 9 ರಂದು ಸೇನಾ ಕಚೇರಿ ಸೇರಿ ಹಲವೆಡೆ ಗಲಭೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಮಾಜಿ ಅಧ್ಯಕ್ಷ ಇಮ್ರಾನ್‌ ಖಾನ್‌ ಅವರನ್ನು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಹೇಳಿದ್ದಾರೆ ಎಂದು ಭಾನುವಾರ ಮಾಧ್ಯಮ ವರದಿ ತಿಳಿಸಿದೆ. 

ಗಲಭೆಯಲ್ಲಿ ಭಾಗಿಯಾದ ಬಗ್ಗೆ ಮುಂದಿನ ದಿನಗಳಲ್ಲಿ ಸಾಕ್ಷ್ಯಾಧಾರಗಳು ದೊರೆತರೆ ಅವರು ಮಿಲಿಟರಿ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಬೇಕಾಗಬಹುದು ಎಂದು ಸಚಿವರು ತಿಳಿಸಿದ್ದಾರೆ ಎಂದು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ತಿಳಿಸಿದೆ. 

ಮೇ 9ರ ಹಿಂಸಾಚಾರಕ್ಕೆ ಸಂಬಂಧಿಸಿ ಪಿಟಿಐ ಮುಖ್ಯಸ್ಥರ ಮೇಲೆ ಯಾವುದೇ ದೂರು ದಾಖಲಾಗಿಲ್ಲ ಎಂದೂ ಅವರು ಖಚಿತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.