ADVERTISEMENT

ಇಮ್ರಾನ್ ಹತ್ಯೆ ಯತ್ನ: ಕೊನೆಗೂ ಎಫ್‌ಐಆರ್ ದಾಖಲು

ಪಿಟಿಐ
Published 8 ನವೆಂಬರ್ 2022, 12:13 IST
Last Updated 8 ನವೆಂಬರ್ 2022, 12:13 IST
ಇಮ್ರಾನ್‌ ಖಾನ್‌
ಇಮ್ರಾನ್‌ ಖಾನ್‌   

ಲಾಹೋರ್‌: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಹತ್ಯೆ ಯತ್ನ ಕುರಿತಂತೆ ಮಂಗಳವಾರ ಎಫ್‌ಐಆರ್ ದಾಖಲಾಗಿದೆ.

24 ಗಂಟೆಯೊಳಗೆ ಎಫ್‌ಐಆರ್ ದಾಖಲಾಗಬೇಕು ಎಂದು ಸೋಮವಾರ ಸುಪ್ರೀಂಕೋರ್ಟ್‌ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪಂಜಾಬ್ ಪೊಲೀಸರು ಭಯೋತ್ಪಾದನಾ ವಿರೋಧಿ ಕಾಯ್ದೆಯ ಸೆಕ್ಷನ್‌ 7 ಹಾಗೂ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್‌ 302, 324 ಹಾಗೂ 440 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ನವೀದ್‌ ಮೊಹಮ್ಮದ್‌ ಬಷೀರ್ ನನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.

ಪಾಕಿಸ್ತಾನ ಪ್ರಧಾನಿ ಶೇಹ್ಬಜ್ ಷರೀಫ್‌, ಒಳಾಡಳಿತ ಸಚಿವ ರಾಣಾ ಸನಾವುಲ್ಹಾ ಹಾಗೂ ಹಿರಿಯ ಸೇನಾ ಅಧಿಕಾರಿ ಮೇಜರ್‌ ಜನರಲ್ ಫೈಸಲ್‌ ನಸೀರ್ ಅವರು ತಮ್ಮ ಹತ್ಯೆಯ ಸಂಚು ರೂಪಿಸಿದ್ದಾರೆ ಎಂದು ಇಮ್ರಾನ್ ಖಾನ್ ಆರೋಪಿಸಿದ್ದರೂ, ಇವರ ಹೆಸರನ್ನು ಎಫ್‌ಐಆರ್‌ನಲ್ಲಿ ದಾಖಲಿಸಿಲ್ಲ.

ADVERTISEMENT

’ನನ್ನ ಹತ್ಯೆ ಯತ್ನಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಂಬ ನೆಲೆಯಲ್ಲಿ ನನಗೇ ಎಫ್‌ಐಆರ್ ದಾಖಲಿಸಲು ಇಷ್ಟು ಕಷ್ಟವಾದರೆ, ಇನ್ನು ಸಾಮಾನ್ಯ ಜನರ ಪರಿಸ್ಥಿತಿ ಹೇಗಿದೆ ಎಂದು ನನಗೆ ಆತಂಕವಾಗುತ್ತಿದೆ‘ ಎಂದು ಇಮ್ರಾನ್‌ ಪ್ರತಿಕ್ರಿಯಿಸಿದ್ದಾರೆ.

‘ಈ ಎಫ್‌ಐಆರ್‌ ಅನ್ನು ನಾವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದೇವೆ‘ ಎಂದು ಪಿಟಿಐ ಪಕ್ಷದ ಹಿರಿಯ ನಾಯಕ ಫಾದ್ ಚೌಧರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.