ರಾಯಿಟರ್ಸ್ ಚಿತ್ರ
ನವದೆಹಲಿ: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹರೀಕ್ ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.
ಸಾರ್ವತ್ರಿಕ ಚುನಾವಣೆಯಲ್ಲಿ 'ಕ್ರಿಕೆಟ್ ಬ್ಯಾಟ್' ಉಳಿಸಿಕೊಳ್ಳುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಕಾಜಿ ಫೈಜ್ ಇಸಾ ಅವರು ಶನಿವಾರ ರಾತ್ರಿ ಆದೇಶ ಹೊರಡಿಸಿದರು. ಇದರೊಂದಿಗೆ ಪಿಟಿಐ ಪಕ್ಷಕ್ಕೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದ್ದು, ಪಕ್ಷದ ಚಿಹ್ನೆ ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಚುನಾವಣೆಯಲ್ಲಿ ಲಕ್ಷಾಂತರ ಮತದಾರರು ಹಾಗೂ ಪಕ್ಷದ ಮೇಲೆ ಪರಿಣಾಮ ಬೀರಬಹುದಾದ ಕೆಟ್ಟ ನಿರ್ಧಾರ ಇದಾಗಿದೆ. ಅಭ್ಯರ್ಥಿಗಳು ವೈಯಕ್ತಿಕ ಚಿಹ್ನೆಯಲ್ಲಿ ಸ್ಪರ್ಧಿಸಿದರೆ ಮತದಾರರನ್ನು ಗೊಂದಲಕ್ಕೀಡು ಮಾಡಲಿದೆ ಎಂದು ಪಿಟಿಐ ಪಕ್ಷದ ಪ್ರಕಟಣೆ ತಿಳಿಸಿದೆ.
ಪಾಕಿಸ್ತಾನ ಚುನಾವಣಾ ಆಯೋಗವು, ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಪಕ್ಷವು ಕ್ರಿಕೆಟ್ ಬ್ಯಾಟ್ ಬಳಕೆ ಮಾಡದಂತೆ ನಿರ್ಬಂಧ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಪಿಟಿಐ ಪಕ್ಷ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕೃತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.