
ಇಸ್ಲಾಮಾಬಾದ್: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡದ ಜೈಲು ಅಧಿಕಾರಿಗಳ ವಿರುದ್ಧ ಇಮ್ರಾನ್ ಸಹೋದರಿ ಶುಕ್ರವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
2023ರಿಂದ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿರುವ ಇಮ್ರಾನ್ ಅವರ ಭೇಟಿಗೆ ವಾರದಲ್ಲಿ ಎರಡು ದಿನ ಅವಕಾಶ ನೀಡುವಂತೆ ಇಸ್ಲಾಮಾಬಾದ್ ಹೈಕೋರ್ಟ್ ಮಾರ್ಚ್ 24ರಂದು ಆದೇಶಿಸಿತ್ತು.
‘ಖಾನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡದೆ ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವ ಜೈಲಿನ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಆರಂಭಿಸಬೇಕು’ ಎಂದು ಅಲೀಮಾ ಖಾನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಖೈಬರ್ ಪಖ್ತುಂಖ್ವಾದ ಮುಖ್ಯಮಂತ್ರಿ ಸೋಹಾಲಿ ಅಫ್ರಿದಿ ಮತ್ತು ಪಿಟಿಐನ ಇತರ ನಾಯಕರ ಸಮ್ಮುಖದಲ್ಲಿ ಅಲೀಮಾ ಅರ್ಜಿ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.