ADVERTISEMENT

ಯುದ್ಧ ಭೀತಿ: ಉಕ್ರೇನ್‌ ತೊರೆಯಲು ಭಾರತೀಯರಿಗೆ ಸೂಚನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2022, 7:28 IST
Last Updated 15 ಫೆಬ್ರುವರಿ 2022, 7:28 IST
ಉಕ್ರೇನ್‌ ಗಡಿಯಲ್ಲಿ ರಷ್ಯಾದ ಯುದ್ಧ ತಾಲೀಮು
ಉಕ್ರೇನ್‌ ಗಡಿಯಲ್ಲಿ ರಷ್ಯಾದ ಯುದ್ಧ ತಾಲೀಮು    

ಕೈವ್‌ (ಉಕ್ರೇನ್‌): ರಷ್ಯಾ ಮತ್ತು ಉಕ್ರೇನ್‌ ನಡುವೆ ಯುದ್ಧ ಕಾರ್ಮೋಡ ಆವರಿಸಿದೆ. ಉಕ್ರೇನ್‌ನಲ್ಲಿರುವ ಭಾರತೀಯರು, ವಿಶೇಷವಾಗಿ ವಿದ್ಯಾರ್ಥಿಗಳು ದೇಶ ತೊರೆಯಬೇಕು ಎಂದು ಉಕ್ರೇನ್‌ನಲ್ಲಿನ ಭಾರತೀಯ ರಾಯಭಾರ ಕಚೇರಿಯು ತಿಳಿಸಿದೆ.

‘ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿಶೇಷವಾಗಿ ವಾಸ್ತವ್ಯದ ಅಗತ್ಯವಿಲ್ಲದ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ದೇಶ ತೊರೆಯಬೇಕು. ಅನಿವಾರ್ಯವಿಲ್ಲದಿದ್ದರೆ ಭಾರತೀಯರು ಉಕ್ರೇನ್‌ ಪ್ರಯಾಣವನ್ನು ರದ್ದುಗೊಳಿಸಬಹುದು’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಉಕ್ರೇನ್‌ನಲ್ಲಿರುವ ಭಾರತೀಯರು ಕೂಡಲೇ ತಮ್ಮ ಸದ್ಯದ ಸ್ಥಿತಿಗತಿಯ ಬಗ್ಗೆ ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ಪೂರೈಸಬೇಕು. ಭಾರತೀಯ ಪ್ರಜೆಗಳಿಗೆ ಎಲ್ಲಾ ಸೇವೆಗಳನ್ನು ಒದಗಿಸಲು ರಾಯಭಾರ ಕಚೇರಿಯು ಕಾರ್ಯನಿರ್ವಹಿಸಲಿದೆ’ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.