ADVERTISEMENT

ಭಯೋತ್ಪಾದನೆ ಮಟ್ಟಹಾಕಲು ಭಾರತ–ಕೆನಡಾ ಸಹಕಾರ ವೃದ್ಧಿ

ಪಿಟಿಐ
Published 20 ಸೆಪ್ಟೆಂಬರ್ 2025, 16:28 IST
Last Updated 20 ಸೆಪ್ಟೆಂಬರ್ 2025, 16:28 IST
<div class="paragraphs"><p>ಭಯೋತ್ಪಾದನೆ ಉಗ್ರವಾದ (ಸಾಂದರ್ಭಿಕ ಚಿತ್ರ)</p></div>

ಭಯೋತ್ಪಾದನೆ ಉಗ್ರವಾದ (ಸಾಂದರ್ಭಿಕ ಚಿತ್ರ)

   

– ಪ್ರಜಾವಾಣಿ ಚಿತ್ರ

ನವದೆಹಲಿ:ಭಯೋತ್ಪಾದನೆ ಹಾಗೂ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಲು ಭಾರತ ಮತ್ತು ಕೆನಡಾ ಸಮ್ಮತಿಸಿವೆ ಎಂದು ವಿದೇಶಾಂಗ ಸಚಿವಾಲಯವು ಶನಿವಾರ ತಿಳಿಸಿದೆ.

ADVERTISEMENT

ಭಾರತದ ಭದ್ರತಾ ಸಲಹೆಗಾರ ಅಜಿತ್‌ ಡೊಬಾಲ್ ಹಾಗೂ ಕೆನಡಾದ ಭದ್ರತಾ ಸಲಹೆಗಾರ ನಥಾಲಿ ಡ್ರೌಯಿನ್ ಅವರ ನಡುವೆ ಗುರುವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಉಭಯ ರಾಷ್ಟ್ರಗಳು ಈ ನಿರ್ಧಾರ ಪ್ರಕಟಿಸಿವೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.

ಉಭಯ ರಾಷ್ಟ್ರಗಳ ನಡುವಿನ ವಿಶ್ವಾಸಾರ್ಹತೆ ಮರುಸ್ಥಾಪಿಸಿ, ರಾಜಕೀಯ ಸಂಬಂಧವನ್ನು ವೃದ್ಧಿಸುವುದರ ಜತೆಗೆ ಸಹಕಾರದ ಹೆಚ್ಚಳವನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಭೆ ನಡೆದಿತ್ತು. 

ಈ ವೇಳೆ, ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಬಲಪಡಿಸಿ ಭದ್ರತಾ ಸಹಕಾರವನ್ನು ಹೆಚ್ಚಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಜತೆಗೆ ಪ್ರಾದೇಶಿಕ ಹಾಗೂ ಜಾಗತಿಕ ಬೆಳವಣಿಗೆ ಕುರಿತಂತೆಯೂ ಅಭಿಪ‍್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದೂ ಸಚಿವಾಲಯ ಹೇಳಿದೆ. 

ಸಿಖ್ ಪ್ರತ್ಯೇಕತಾವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರವಾಗಿ ಉಭಯ ರಾಷ್ಟ್ರಗಳ ನಡುವೆ ವೈಮನಸ್ಸು ಎದುರಾಗಿ, ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಈ ವರ್ಷ ಜೂನ್‌ನಲ್ಲಿ ಜಿ–7 ಶೃಂಗದ ವೇಳೆ ಕೆನಡಾ ಪ್ರಧಾನಿಯ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದ ಬಳಿಕ ದ್ವಿಪಕ್ಷೀಯ ಸಂಬಂಧ ತಿಳಿಯಾಗುವ ಸೂಚನೆ ಸಿಕ್ಕಿತ್ತು. ಅದರ ಮುಂದುವರೆದ ಭಾಗವಾಗಿ ಉಭಯ ರಾಷ್ಟ್ರಗಳ ಭದ್ರತಾ ಸಲಹೆಗಾರರ ಈ ಸಭೆ ನಡೆದಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.