ADVERTISEMENT

ಚೀನಾ ಅಧ್ಯಕ್ಷರೊಂದಿಗೆ ಮಾತುಕತೆ; ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಭಾರತ ಕಳವಳ

ಪಿಟಿಐ
Published 1 ಸೆಪ್ಟೆಂಬರ್ 2025, 2:09 IST
Last Updated 1 ಸೆಪ್ಟೆಂಬರ್ 2025, 2:09 IST
<div class="paragraphs"><p>ನರೇಂದ್ರ ಮೋದಿ,&nbsp;ಷಿ ಜಿನ್‌ಪಿಂಗ್‌</p></div>

ನರೇಂದ್ರ ಮೋದಿ, ಷಿ ಜಿನ್‌ಪಿಂಗ್‌

   

(ಪಿಟಿಐ ಚಿತ್ರ)

ತಿಯಾನ್‌ಜಿನ್‌: ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರೊಂದಿಗಿನ ಮಾತುಕತೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

ADVERTISEMENT

ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆ ವೇಳೆ ಜಿನ್‌ಪಿಂಗ್‌ ಅವರೊಂದಿಗೆ ಹಲವು ವಿಷಯಗಳ ಕುರಿತು ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಆದ್ಯತಾ ವಿಷಯವನ್ನಾಗಿ ಪ್ರಸ್ತಾಪಿಸಿದ್ದಾರೆ.

ಈ ಸಂದರ್ಭದಲ್ಲಿ ಭಯೋತ್ಪಾದನೆಯು ಉಭಯ ದೇಶಗಳ ಮೇಲೆ ಪರಿಣಾಮ ಬೀರುವುದರಿಂದ ಪರಸ್ಪರ ಸಹಕಾರವನ್ನು ಪ್ರತಿಪಾದಿಸಿದ್ದು, ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆಯನ್ನು ಆದ್ಯತಾ ವಿಷಯವನ್ನಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. ಇದರ ಪರಿಣಾಮ ಉಭಯ ದೇಶಗಳ ಮೇಲೆ ಬೀರುತ್ತದೆ. ಹಾಗಾಗಿ ಭಯೋತ್ಪಾದನೆ ಎದುರಿಸಲು ಪರಸ್ಪರ ಬೆಂಬಲವನ್ನು ವಿಸ್ತರಿಸುವುದು ಅತಿ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆ ವಿಷಯವನ್ನು ಭಾರತ ನಿಭಾಯಿಸಿದ್ದರ ಬಗ್ಗೆ ಚೀನಾದಿಂದ ಸಹಕಾರವನ್ನು ಪಡಿದಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನದಿಂದ ಚೀನಾದ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆಯೇ ಎಂಬ ಪ್ರಶ್ನೆಗೆ ನೇರವಾಗಿ ಉತ್ತರಿಸದ ಮಿಸ್ರಿ, ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ನಮ್ಮ ತಿಳಿವಳಿಕೆಯನ್ನು ಸ್ಪಷ್ಟವಾಗಿ ಪ್ರಸ್ತಾಪಿಸಲಾಯಿತು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.