ADVERTISEMENT

ಪಾಕಿಸ್ತಾನ ಕುಲಭೂಷಣ್‌ ಜಾದವ್‌ ಅವರನ್ನು ದಾಳವಾಗಿ ಬಳಸುತ್ತಿದೆ: ಭಾರತ 

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 6:48 IST
Last Updated 21 ಫೆಬ್ರುವರಿ 2019, 6:48 IST
   

ನವದೆಹಲಿ: ಭಯೋತ್ಪಾದನೆಯನ್ನು ಬೆಂಬಲಿಸುತ್ತಿರುವ ಪಾಕಿಸ್ತಾನ, ವಿಶ್ವದ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಕುಲಭೂಷಣ್‌ ಜಾದವ್‌ ಅವರನ್ನು ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ಭಾರತ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ (ಐಸಿಜೆ) ಬುಧವಾರ ಹೇಳಿದೆ.

ಕಳೆದ ವಾರ ನಡೆದ ಪುಲ್ವಾಮಾ ದಾಳಿಯಲ್ಲಿ 40 ಯೋಧರು ಮೃತಪಟ್ಟಿದ್ದಾರೆ. ಈ ದಾಳಿಯನ್ನು ಪಾಕಿಸ್ತಾನ ಮೂಲದಜೆಇಎಂ ಉಗ್ರ ಸಂಘಟನೆ ನಡೆಸಿದೆ ಎಂದು ಭಾರತದ ಪರವಾಗಿ ವಾದ ಮಂಡಿಸುತ್ತಿರುವ ಹರೀಶ್‌ ಸಾಳ್ವೆ ನ್ಯಾಯಾಲಯಕ್ಕೆ ಹೇಳಿದರು.

ಪಾಕಿಸ್ತಾನ ಭಯೋತ್ಪಾದನೆಯನ್ನು ಹರಡುತ್ತಿದೆ ಎಂದು ಈಗಾಗಲೇ ಹಲವು ದೇಶಗಳು ದೂಷಿಸಿವೆ, ಅಮೆರಿಕ ಸಹ ಪಾಕಿಸ್ತಾನವನ್ನು ಭಯೋತ್ಪಾದಕ ದೇಶವೆಂದು ಕರೆದಿದೆ. ಹಾಗೇಅಂತರರಾಷ್ಟ್ರೀಯ ಸಂಸ್ಥೆಗಳು ನೀಡುವ ಹಣವನ್ನು ಪಾಕಿಸ್ತಾನ ಭಯೋತ್ಪಾದನೆಗೆ ಬಳಕೆ ಮಾಡುತ್ತಿದೆ ಎಂದು ಇರಾನ್‌ ಹೇಳಿದೆ ಎಂದುಹರೀಶ್‌ ಸಾಳ್ವೆತಿಳಿಸಿದ್ದಾರೆ.

ADVERTISEMENT

ವಿಶ್ವಸಂಸ್ಥೆ ನಿಷೇಧಿಸಿರುವ ಭಯೋತ್ಪಾದಕ ಸಂಘಟನೆಗಳು ಮತ್ತು ದಾವೂದ್‌ ಇಬ್ರಾಹಿಂ ಅವರಂತಹ ಅಪರಾಧಿಗಳಿಗೆ ಪಾಕಿಸ್ತಾನ ಸ್ವರ್ಗವಾಗಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಡಾನ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ 26/11ರ ಮುಂಬೈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಸಾಳ್ವೆ ನ್ಯಾಯಾಲಯಕ್ಕೆ ತಿಳಿಸಿದರು.

ಕುಲಭೂಷಣ್‌ ಜಾದವ್‌ಗೆಪಾಕಿಸ್ತಾನ ನ್ಯಾಯಾಲಯ ನೀಡಿದ್ದ ಮರಣದಂಡನೆ ಶಿಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ಭಾರತ ಅಂತರರಾಷ್ಟ್ರೀಯ ನ್ಯಾಯಾಲಯಕ್ಕೆ ಮನವಿ ಮಾಡಿದ್ದು ಕಳೆದ ನಾಲ್ಕು ದಿನಗಳಿಂದ ವಿಚಾರಣೆ ನಡೆಯುತ್ತಿದೆ. ಪಾಕಿಸ್ತಾನ ವಿಯೆನ್ನಾ ಒಪ್ಪಂದದ ಕಾನೂನುಗಳನ್ನು ಉಲ್ಲಂಘನೆ ಮಾಡಿದೆ ಎಂದು ಭಾರತ ಬಲವಾಗಿ ವಾದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.