ADVERTISEMENT

ಕಾಬೂಲ್‌ ದಾಳಿ: ಭಾರತ ಖಂಡನೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 14:50 IST
Last Updated 7 ಮಾರ್ಚ್ 2020, 14:50 IST

ನವದೆಹಲಿ: ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಶುಕ್ರವಾರ ನಡೆದ ಉಗ್ರರ ದಾಳಿಯನ್ನು ಭಾರತ ಖಂಡಿಸಿದೆ.

ಈ ಕುರಿತು ವಿದೇಶಾಂಗ ಇಲಾಖೆ ಪ್ರಕಟಣೆ ಹೊರಡಿಸಿದ್ದು, ‘ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಅಂತರರಾಷ್ಟ್ರೀಯ ಸಮುದಾಯ ಒಗ್ಗಟ್ಟಾಗಿ ನಿಲ್ಲಬೇಕು. ಇಂಥಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಉಲ್ಲೇಖಿಸಿದೆ.

ಹಜಾರಸ್‌ ಸಮುದಾಯದ ನಾಯಕ ಶಹೀದ್‌ ಮಜ್ರಿ ಅವರ ಸ್ಮರಣಾರ್ಥ ಶುಕ್ರವಾರ ಕಾರ್ಯಕ್ರಮ ಆಯೋಜಿಸಿತ್ತು. ಇದರಲ್ಲಿ ಹಲವು ಹಿರಿಯ ರಾಜಕೀಯ ನಾಯಕರು ಭಾಗವಹಿಸಿದ್ದರು. ಉಗ್ರರ ದಾಳಿಯಲ್ಲಿ 32 ಜನರು ಮೃತಪಟ್ಟಿದ್ದರು. 12ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ದಾಳಿಯ ಹೊಣೆಯನ್ನು ಐಎಸ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.