ADVERTISEMENT

ಶ್ರೀಲಂಕಾ: ‘ಜಾಫ್ನಾ ಸಾಂಸ್ಕೃತಿಕ ಕೇಂದ್ರ’ ಉದ್ಘಾಟನೆ

ಪಿಟಿಐ
Published 11 ಫೆಬ್ರುವರಿ 2023, 15:02 IST
Last Updated 11 ಫೆಬ್ರುವರಿ 2023, 15:02 IST
ಎಲ್‌.ಮುರುಗನ್‌
ಎಲ್‌.ಮುರುಗನ್‌   

ಕೊಲಂಬೊ: ಭಾರತದ ನೆರವಿನೊಂದಿಗೆ ನಿರ್ಮಿಸಲಾದ ಅತ್ಯಾಧುನಿಕ ‘ಜಾಫ್ನಾ ಸಾಂಸ್ಕೃತಿಕ ಕೇಂದ್ರ’ವನ್ನು ಶನಿವಾರ ಲೋಕಾರ್ಪಣೆ ಮಾಡಲಾಯಿತು.

ಶ್ರೀಲಂಕಾ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್‌.ಮುರುಗನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಾಂಸ್ಕೃತಿಕ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2015ರ ಮಾರ್ಚ್‌ನಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು.

ಈ ಕೇಂದ್ರದಲ್ಲಿ 600ಕ್ಕೂ ಹೆಚ್ಚು ಜನರಿಗೆ ಆಸನ ವ್ಯವಸ್ಥೆ ಇದ್ದು, ವಸ್ತುಸಂಗ್ರಹಾಲಯವನ್ನೂ ಒಳಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.