ADVERTISEMENT

ಭಾರತ ಸೂಪರ್​​​ ಪವರ್​​ ಆಗುತ್ತಿದೆ, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕ್‌ ನಾಯಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಏಪ್ರಿಲ್ 2024, 7:43 IST
Last Updated 30 ಏಪ್ರಿಲ್ 2024, 7:43 IST
<div class="paragraphs"><p>ಮೌಲಾನಾ ಫಜ್ಲುರ್ ರೆಹಮಾನ್</p></div>

ಮೌಲಾನಾ ಫಜ್ಲುರ್ ರೆಹಮಾನ್

   

(ಚಿತ್ರ ಕೃಪೆ– @KanishkaDadhich)

ಇಸ್ಲಾಮಾಬಾದ್‌: ಭಾರತ ಜಾಗತಿಕ ಸೂಪರ್ ಪವರ್ ಆಗುತ್ತಿದೆ. ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎನ್‌ಡಿ ಟಿವಿ ವರದಿ ಮಾಡಿದೆ.

ADVERTISEMENT

ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು ಸೂಪರ್‌ ಪವರ್‌ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನ ತಪ್ಪಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದ್ದೇವೆ. ಈ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ ಎಂದು ಗುಡುಗಿದ್ದಾರೆ.

ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಷ್ಟ್ರವಾಗಿ ಮಾರ್ಪಟ್ಟಿದ್ದೇವೆ. 1973ರಿಂದ ಕೌನ್ಸಿಲ್ ಆಫ್ ಇಸ್ಲಾಮಿಕ್ ಐಡಿಯಾಲಜಿ(ಸಿಐಐ)ಯ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದೂ ಅವರು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.