ADVERTISEMENT

ಶ್ರೀಲಂಕಾದ ಹೊಸ ಸರ್ಕಾರದ ಜತೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ: ಭಾರತ

ಪಿಟಿಐ
Published 13 ಮೇ 2022, 2:41 IST
Last Updated 13 ಮೇ 2022, 2:41 IST
 ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ
ಶ್ರೀಲಂಕಾದ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ   

ಕೊಲಂಬೊ: ‘ಪ್ರಜಾಸತ್ತಾತ್ಮಕವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಭಾರತ ಎದುರು ನೋಡುತ್ತಿದೆ. ದ್ವೀಪ ರಾಷ್ಟ್ರದ ಜನರಿಗೆ ನವದೆಹಲಿಯ ಕಾಳಜಿ ಮತ್ತು ಬದ್ಧತೆ ಮುಂದುವರಿಯುತ್ತದೆ’ ಎಂದು ಭಾರತೀಯ ಹೈಕಮಿಷನ್ ಗುರುವಾರ ತಿಳಿಸಿದೆ.

ರನಿಲ್ ವಿಕ್ರಮಸಿಂಘೆ ಅವರು ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಮೊದಲ ಪ್ರತಿಕ್ರಿಯೆಯಾಗಿ ಟ್ವೀಟ್‌ ಮಾಡಿರುವ ಭಾರತೀಯ ಹೈಕಮಿಷನ್‌, ‘ಭಾರತವು ಶ್ರೀಲಂಕಾದಲ್ಲಿ ರಾಜಕೀಯ ಸ್ಥಿರತೆಯನ್ನು ಬಯಸುತ್ತದೆ’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.